ಪಂಜಾಬ್ ರಾಜ್ಯ ಮುಖ್ಯಮಂತ್ರಿ ಅಮರೀಂದರ್ ಸಿಂಗ್ 
ದೇಶ

ಒಬ್ಬ ಯೋಧ ಹುತಾತ್ಮನಾದರೆ, 10 ಪಾಕ್ ಸೈನಿಕರು, ಉಗ್ರರು ಸಾಯಬೇಕು: ಸಿಎಂ ಅಮರೀಂದರ್ ಸಿಂಗ್

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ, ಉದ್ಧಟತನವನ್ನು ಪ್ರದರ್ಶಿಸುತ್ತಿರುವ ಪಾಕಿಸ್ತಾನದ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಪಂಜಾಬ್ ರಾಜ್ಯ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ, ಉದ್ಧಟತನವನ್ನು ಪ್ರದರ್ಶಿಸುತ್ತಿರುವ ಪಾಕಿಸ್ತಾನದ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಪಂಜಾಬ್ ರಾಜ್ಯ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು, ಒಬ್ಬ ಯೋಧ ಹುತಾತ್ಮನಾದರೆ, 10 ಪಾಕಿಸ್ತಾನ ಸೈನಿಕರು ಹಾಗೂ ಉಗ್ರರು ಸಾವನ್ನಪ್ಪಬೇಕೆಂದು ಗುರುವಾರ ಹೇಳಿದ್ದಾರೆ. 
ಇಂದು ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದ ಆರ್'ಎಸ್ ಪುರ ಸೆಕ್ಟರ್ ಬಳಿಯಿರುವ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿತ್ತು. ಈ ವೇಳೆ ಪಾಕಿಸ್ತಾನ ನಡೆಸಿದ್ದ ಅಪ್ರಚೋದಿತ ಗುಂಡು ಹಾಗೂ ಶೆಲ್ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದರು. 
ಈ ಹಿನ್ನಲೆಯಲ್ಲಿ ಪಾಕಿಸ್ತಾನದ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಅಮರೀಂದರ್ ಸಿಂಗ್ ಅವರು, ನಮ್ಮಲ್ಲಿರುವ ಒಬ್ಬ ಯೋಧ ಹುತಾತ್ಮನಾದರೆ, ಪಾಕಿಸ್ತಾನದಲ್ಲಿ 10 ಯೋಧರು, ಉಗ್ರರು ಸಾವನ್ನಪ್ಪಲೇಬೇಕು. ನಾನು ಜೀವನವನ್ನು ಈ ರೀತಿ ನೋಡುತ್ತೇನೆಂದು ಹೇಳಿದ್ದಾರೆ. 
ಅಮರೀಂದರ್ ಸಿಂಗ್ ಅವರು ಭಾರತೀಯ ಸೇನೆಯಲ್ಲಿ ದೀರ್ಘಕಾಲಿಕ ಸೇವೆಯನ್ನು ಸಲ್ಲಿಸಿದ್ದುಕ 1965ರ ಇಂಡೋ-ಪಾಕಿಸ್ತಾನದ ಕದನ ಸಂದರ್ಭದಲ್ಲಿ ಕ್ಯಾಪ್ಟೆನ್ ಆಗಿ ಸೇವೆ ಸಲ್ಲಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು