ಅಗ್ನಿ-5 
ದೇಶ

ಅಗ್ನಿ-5 ಅಣ್ವಸ್ತ್ರ ಕ್ಷಿಪಣಿ ಪರೀಕ್ಷೆ ಯಶಸ್ವಿ; ಪಾಕ್, ಚೀನಾಗೆ ನಡುಕ

ಭಾರತದ ಅತ್ಯಂತ ದೂರಗಾಮಿ ಅಣ್ವಸ್ತ್ರ ಕ್ಷಿಪಣಿ ಎಂದೇ ಖ್ಯಾತಿಗಳಿಸಿರುವ "ಅಗ್ನಿ-5" ಕ್ಷಿಪಣೆ ಪರೀಕ್ಷೆ ಸತತ ಐದನೇ ಬಾರಿಗೂ ಯಶಸ್ವಿಯಾಗಿದೆ...

ಅಬ್ದುಲ್ ಕಲಾಂ ದ್ವೀಪ(ಒಡಿಶಾ): ಭಾರತದ ಅತ್ಯಂತ ದೂರಗಾಮಿ ಅಣ್ವಸ್ತ್ರ ಕ್ಷಿಪಣಿ ಎಂದೇ ಖ್ಯಾತಿಗಳಿಸಿರುವ "ಅಗ್ನಿ-5" ಕ್ಷಿಪಣೆ ಪರೀಕ್ಷೆ ಸತತ ಐದನೇ ಬಾರಿಗೂ ಯಶಸ್ವಿಯಾಗಿದೆ. 
ಒಡಿಶಾದ ಅಬ್ದುಲ್ ಕಲಾಂ ದ್ವೀಪದಲ್ಲಿ ಅಗ್ನಿ-5 ಪ್ರಬಲ ಖಂಡಾಂತರ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಬೆಳಗ್ಗೆ 9.53ಕ್ಕೆ ನಡೆಯಿತು. ಈ ಪರೀಕ್ಷಾ ಪ್ರಯೋಗ ಯಶಸ್ವಿಯಾಗಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ದೃಢೀಕರಿಸಿದ್ದಾರೆ.
ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಈ ಪ್ರಬಲ ಅಣ್ವಸ್ತ್ರ ಕ್ಷಿಪಣಿಯನ್ನು ಸಿದ್ಧಪಡಿಸಿದ್ದು, ಪಾಕಿಸ್ತಾನದ ಬಹುತೇಕ ಪ್ರದೇಶಗಳು ಒಳಗೊಂಡಂತೆ ಉತ್ತರ ಚೀನಾದ ಯಾವುದೇ ಭಾಗ ಮತ್ತು ಪಶ್ಚಿಮದಲ್ಲಿ ಯುರೋಪ್‌ನ ಕೊನೆಯ ಅಂಚಿನವರೆಗೂ ಕ್ಷಿಪಣಿಯು ತಲುಪುವ ಸಾಮರ್ಥ್ಯ ಹೊಂದಿದೆ.
ಅಗ್ನಿ-5 ಮೂರು ಸ್ತರದ ಕ್ಷಿಪಣಿಯಾಗಿದ್ದು,17 ಮೀ. ಉದ್ದ ಮತ್ತು 1.5 ಟನ್‌ ಭಾರ ಹೊಂದಿದೆ. ಮೊದಲನೇ ಸ್ತರದ ರಾಕೆಟ್‌ ಎಂಜಿನ್‌, ಕ್ಷಿಪಣಿಯನ್ನು 40 ಕಿ.ಮೀ. ಎತ್ತರಕ್ಕೆ ಒಯ್ದರೆ, ಎರಡನೇ ಸ್ತರವು ಕ್ಷಿಪಣಿಯನ್ನು 150 ಕಿ.ಮೀ.  ಎತ್ತರಕ್ಕೆ ನೂಕುತ್ತದೆ. 3ನೇ ಸ್ತರವು ಭೂಮಿಗಿಂತ 300 ಕಿ.ಮೀ. ಎತ್ತರಕ್ಕೆ ಕೊಂಡೊಯ್ಯುತ್ತದೆ. ಅಂತಿಮವಾಗಿ ಸುಮಾರು 800 ಕಿ.ಮೀ. ಎತ್ತರಕ್ಕೆ ಕ್ಷಿಪಣಿ ತಲುಪುತ್ತದೆ. 
ಸುಮಾರು 1 ಸಾವಿರ ಕೆಜಿ ಅಣ್ವಸ್ತ್ರವನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯ ಈ ಪ್ರಬಲ ಕ್ಷಿಪಣಿಗಿದ್ದು, ಸಂಚಾರಿ ಸಾಮರ್ಥ್ಯ ಇರುವ ಡಬ್ಬಿಯಾಕಾರದ ಕ್ಯಾನಿಸ್ಟರ್‌ನಲ್ಲಿಟ್ಟು ಉಡಾಯಿಸುವಂಥ ಮಾದರಿಯ ಕ್ಷಿಪಣಿ ಇದು. ಉಡಾವಣೆಗೆ ಸ್ಥಿರ ವೇದಿಕೆಯೇ ಬೇಕೆಂದೇನೂ ಇಲ್ಲ. ಮೊಬೈಲ್‌ ಲಾಂಚರ್‌ ವಾಹನ ಬಳಕೆ ಮಾಡಿ ಈ ಕ್ಷಿಪಣಿಯನ್ನು ದೇಶದ ಯಾವುದೇ ಮೂಲೆಯಿಂದಾದರೂ ತ್ವರಿತವಾಗಿ ಉಡಾಯಿಸಬಹುದಾಗಿದೆ.
ಇನ್ನು ಕ್ಷಿಪಣಿಯ ಕ್ಯಾನಿಸ್ಟರ್‌ ವ್ಯವಸ್ಥೆ ವೈರಿಗಳ ಕಣ್ತಪ್ಪಿಸಲು ಸಹಕಾರಿಯಾಗುತ್ತದೆ. ಇದೇ ಕಾರಣಕ್ಕೆ  ಭಾರತದ ಈ ಪ್ರಬಲ ಕ್ಷಿಪಣಿ ಇದೀಗ ಚೀನಾ ಮತ್ತು ಪಾಕಿಸ್ತಾನ ದೇಶಗಳ ತಲೆನೋವಿಗೆ ಕಾರಣವಾಗಿದೆ. ಈ ಹಿಂದೆ 2012, 2013, 2015 ಮತ್ತು 2016ರಲ್ಲಿ ಒಟ್ಟು ನಾಲ್ಕು ಬಾರಿ ಅಗ್ನಿ-5 ಕ್ಷಿಪಣಿಯ ಮೂಲ ಆವೃತ್ತಿಯ ಪರೀಕ್ಷಾರ್ಥ ಉಡಾವಣೆ ಮಾಡಲಾಗಿತ್ತು. ಈ ನಾಲ್ಕು ಪರೀಕ್ಷೆಯೂ ಅಭೂತಪೂರ್ವ ಯಶಸ್ಸು ಸಾಧಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT