ಮೊಶೆ ಮತ್ತು ಬೆಂಜಮಿನ್ ನೇತಾನ್ಯಹು 
ದೇಶ

ಮೊಶೆ ಜತೆ ಮುಂಬೈನ ನಾರಿಮನ್‌ ಹೌಸ್‌ ಗೆ ಭೇಟಿ ನೀಡಿದ ಇಸ್ರೇಲ್ ಪ್ರಧಾನಿ

ಆರು ದಿನಗಳ ಭಾರತ ಪ್ರವಾಸದಲ್ಲಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತಾನ್ಯಹು ಅವರು ಐದನೇ ದಿನವಾದ ಗುರುವಾರ ದೇಶದ ವಾಣಿಜ್ಯ ನಗರಿ ಮುಂಬೈಗೆ ಭೇಟಿ...

ಮುಂಬೈ: ಆರು ದಿನಗಳ ಭಾರತ ಪ್ರವಾಸದಲ್ಲಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತಾನ್ಯಹು ಅವರು ಐದನೇ ದಿನವಾದ ಗುರುವಾರ ದೇಶದ ವಾಣಿಜ್ಯ ನಗರಿ ಮುಂಬೈಗೆ ಭೇಟಿ ನೀಡಿದ್ದು, 26/11 ಉಗ್ರ ದಾಳಿಯಲ್ಲಿ ತಂದೆ ಮತ್ತು ತಾಯಿಯನ್ನು ಕಳೆದುಕೊಂಡಿದ್ದ ಇಸ್ರೇಲ್‌ ಬಾಲಕ ಮೊಶೆ ಹೋಲ್ಟ್ಜ್‌ಬರ್ಗ್‌ ನೊಂದಿಗೆ ದಾಳಿಗೆ ತುತ್ತಾಗಿದ್ದ ನಾರಿಮನ್ ಹೌಸ್ (ಚಬಡ್ ಹೌಸ್)ಗೆ ಭೇಟಿ ನೀಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಇಸ್ರೇಲ್ ಪ್ರಧಾನಿ ನೇತಾನ್ಯಹು, ನಾರಿಮನ್ ಹೌಸ್ ಅನ್ನು 'ಲಿವಿಂಗ್ ಮೆಮೋರಿಯಲ್' ಆಗಿ ನಿರ್ಮಾಣ ಮಾಡುವ ಯೋಜನೆ ಘೋಷಿಸಿದರು.
ಇಂದು ಬೆಳಗ್ಗೆ ಮುಂಬೈ ದಾಳಿ ಸಂತ್ರಸ್ತರ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದ್ದ ಇಸ್ರೇಲ್ ಪ್ರಧಾನಿ ನೇತಾನ್ಯಹು ಸಂಜೆ ನಾರಿಮನ್‌ ಹೌಸ್‌ ಗೆ ಭೇಟಿ ನೀಡಿ, ಬಾಲಕ ಮೊಶೆಯ ಜತೆಗೆ ನಗುನಗುತ್ತಲೆ ಕುಶಲೋಪರಿ ನಡೆಸಿದರು. ಮೊಶೆಯ ಹಣೆಗೆ ಮುತ್ತಿಟ್ಟು, ಹೆಗಲ ಮೇಲೆ ಕೈಹಾಕಿ, ಮೈದವಡಿ ಸ್ನೇಹಪರದಿಂದಲೇ ಇಸ್ರೇಲ್ ಪ್ರಧಾನಿ ಮಾತನಾಡಿದರು.
ಮುಂಬೈ ದಾಳಿಯಲ್ಲಿ ಬದುಕುಳಿದಿದ್ದ ಮೊಶೆ ಒಂಬತ್ತು ವರ್ಷಗಳ ನಂತರ ಮುಂಬೈಗೆ ಬಂದಿದ್ದು, ನಾರಿಮನ್‌ ಹೌಸ್‌ನಲ್ಲಿ ಇಸ್ರೇಲ್‌ ಪ್ರಧಾನಿ ನೇತಾನ್ಯಹು ಅವರನ್ನು ಭೇಟಿಯಾಗಿದ್ದಾನೆ. 
ನವೆಂಬರ್ 26, 2008ರಲ್ಲಿ ತಾಜ್ ಹೋಟೆಲ್ ಹಾಗೂ ನಾರಿಮನ್ ಹೌಸ್ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಮೊಶೆ ತಂದೆ ಗೇವ್ರಿಯಲ್‌ ಮತ್ತು ತಾಯಿ ರಿವ್ಕಾ ಹೋಲ್ಟ್ಜ್‌ಬರ್ಗ್‌ ಸೇರಿ 166 ಮಂದಿ ಮೃತಪಟ್ಟಿದ್ದರು. ಹಾಗ ಎರಡು ವರ್ಷದ ಕಂದನಾಗಿದ್ದ ಮೊಶೆಯನ್ನು ಭಾರತೀಯ ದಾದಿ ಸಾಂಡ್ರಾ ಸಾಮ್ಯುಯೆಲ್ಸ್‌ ರಕ್ಷಿಸಿದ್ದರು. ಈಗ ಅವನು ಅಜ್ಜ ಅಜ್ಜಿಯೊಂದಿಗೆ ಇಸ್ರೇಲ್‌ನಲ್ಲಿ ನೆಲೆಸಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?