ದೆಹಲಿ- ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯ, ನಾಗಲ್ಯಾಂಡ್ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಮುಂದಿನ ತಿಂಗಳ 18 ರಂದು ತ್ರಿಪುರಾದಲ್ಲಿ , 27 ರಂದು ಮೇಘಾಲಯ ಹಾಗೂ ನಾಗಲ್ಯಾಂಡ್ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ.
ಚುನಾವಣೆಗಾಗಿ ಇದೇ ಮೊದಲ ಬಾರಿಗೆ ವಿದ್ಯುನ್ಮಾನ ಮತಯಂತ್ರಗಳು ಹಾಗೂ ವಿವಿಪ್ಯಾಟ್ ಬಳಸಲಾಗುತ್ತಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಎ. ಕೆ. ಜೋತಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೂರು ರಾಜ್ಯಗಳ ಚುನಾವಣಾ ಫಲಿತಾಂಶ ಮಾರ್ಚ್ 3 ರಂದು ಪ್ರಕಟಿಸಲಾಗುವುದು, ಚುನಾವಣಾ ವೆಚ್ಚದ ಮಿತಿಯನ್ನು ಪ್ರತಿಯೊಬ್ಬ ಅಭ್ಯರ್ಥಿಗೆ 20 ಲಕ್ಷ ರೂಗೆ ನಿಗದಿಪಡಿಸಲಾಗಿದ್ದು, ಇಂದಿನಿಂದಲೇ ಮೂರು ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ತಿಳಿಸಿದರು.