ದೇಶ

ಚುನಾವಣಾ ಆಯೋಗದ ಶಿಫಾರಸ್ಸನ್ನು ದೆಹಲಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ ಆಮ್ ಆದ್ಮಿ ಪಕ್ಷದ ಶಾಸಕರು!

Srinivas Rao BV
ನವದೆಹಲಿ: ಲಾಭದಾಯಕ ಹುದ್ದೆ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಚುನಾವಣಾ ಆಯೋಗ ಅನರ್ಹಗೊಳಿಸಲು ಶಿಫಾರಸ್ಸು ಮಾಡಿರುವುದನ್ನು ಆಪ್ ಶಾಸಕರು ದೆಹಲಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದಾರೆ. 
7 ಶಾಸಕರು ಚುನಾವಣಾ ಆಯೋಗದ ಶಿಫಾರಸ್ಸನ್ನು ಪ್ರಶ್ನಿಸಿ ಹೈಕೋರ್ಟ್ ನ ಹಂಗಾಮಿ ನ್ಯಾಯಮೂರ್ತಿ ಗೀತಾ ಮಿತ್ತಲ್ ಎದುರು ಅರ್ಜಿ ಸಲ್ಲಿಸಿದ್ದು, ಇಂದೇ ವಿಚಾರಣೆ ನಡೆಯುವ ಸಾಧ್ಯತೆ ಇದೆ.  
ಪ್ರಶಾಂತ್ ಪಟೇಲ್ ಎಂಬುವವರು 21 ಆಪ್ ಶಾಸಕರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಈ ಬಗ್ಗೆ ದೂರು ಸ್ವೀಕರಿಸಿದ್ದ ಆಯೋಗ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಪಕ್ಷದಿಂದ ಸ್ಪಷ್ಟನೆ ಕೂಡ ಕೇಳಿತ್ತು. ತಮ್ಮ ವಿರುದ್ಧ ಪ್ರಕರಣವನ್ನು ಕೈ ಬಿಡುವಂತೆ ಆಪ್ ನ ಶಾಸಕರು ಆಯೋಗಕ್ಕೆ ಮನವಿ ಮಾಡಿದ್ದರಾದರೂ,  ಆಯೋಗ ಅವರ ಅರ್ಜಿಯನ್ನು ತಿರಸ್ಕರಿಸಿತ್ತು. ಈಗ ಲಾಭದಾಯಕ ಹುದ್ದೆ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಚುನಾವಣಾ ಆಯೋಗ ಅನರ್ಹಗೊಳಿಸಲು ಶಿಫಾರಸ್ಸು ಮಾಡಲಾಗಿದೆ 
SCROLL FOR NEXT