26/11 ರ ಮುಂಬೈ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಫೀಜ್ ಸಯೀದ್ ವಿರುದ್ಧದ ಸಾಕ್ಷ್ಯಾಧಾರಗಳನ್ನು ಪಾಕಿಸ್ತಾನ ನಿರ್ಲಕ್ಷಿಸುತ್ತಿದೆ ಎಂದು ಭಾರತ ಆರೋಪಿಸಿದೆ.
2017 ರ ನವೆಂಬರ್ ನಲ್ಲಿ ಪಾಕಿಸ್ತಾನ ಪ್ರಧಾನಿ ಶಾಹೀದ್ ಖಾಕನ್ ಅಬ್ಬಾಸಿ, ಹಫೀಜ್ ಸಯೀದ್ ವಿರುದ್ಧ ಕ್ರಮ ಕೈಗೊಳ್ಳಬಹುದಾದ ರೀತಿಯಲ್ಲಿ ಭಾರತ ಯಾವುದೇ ಸಾಕ್ಷ್ಯಾಧಾರಗಳನ್ನೂ ಒದಗಿಸಿಲ್ಲ ಎಂದು ಹೇಳಿದ್ದರು. ಈಗ ಅಮೆರಿಕ ಸಹ ಹಫೀಜ್ ಸಯೀದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದು, ಹಫೀಜ್ ಸಯೀದ್ ವಿರುದ್ಧದ ಸಾಕ್ಷ್ಯಗಳನ್ನು ಪಾಕ್ ನಿರ್ಲಕ್ಷಿಸಿದೆ ಎಂದು ಭಾರತ ಆರೋಪಿಸಿದೆ.
ಯಾವುದೇ ಓರ್ವ ವ್ಯಕ್ತಿಯನ್ನು ಜಾಗತಿಕ ಮಟ್ಟದಲ್ಲಿ ಭಯೋತ್ಪಾದಕ ಎಂದು ಗುರುತಿಸಬೇಕಾದರೆ ಸಾಕಷ್ಟು ಸಾಕ್ಷ್ಯಾಧಾರಗಳನ್ನು ಇಟ್ಟುಕೊಂಡೇ ಗುರುತಿಸಲಾಗುತ್ತದೆ. ನೀವು ಕಣ್ಮುಚ್ಚಿ ಏನೂ ಆಗಿಯೇ ಇಲ್ಲ ಎಂದು ಹೇಳಬಹುದು, ಆದರೆ ನಿಮ್ಮ ಮುಂದಿರುವ ಸಾಕ್ಷ್ಯಾಧಾರಗಳನ್ನು ಗಮನಿಸಿ ಕ್ರಮ ಕೈಗೊಳ್ಳಬೇಕು ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ.