ಕುಮಾರ್ ವಿಶ್ವಾಸ್ 
ದೇಶ

ಎಎಪಿ ಶಾಸಕರ ಲಾಭದಾಯಕ ಹುದ್ದೆ ಪ್ರಕರಣ: ದುರದೃಷ್ಟಕರ ಎಂದ ಕುಮಾರ್ ವಿಶ್ವಾಸ್

ಲಾಭದಾಯಕ ಹುದ್ದೆ ಹೊಂದಿದೆ ಆರೋಪದ ಮೇಲೆ 20 ಎಎಪಿ ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ರಾಷ್ಟ್ರಪತಿಗಳಿಗೆ ಶಿಫಾರಸು...

ಅಹ್ಮದನಗರ: ಲಾಭದಾಯಕ ಹುದ್ದೆ ಹೊಂದಿದೆ ಆರೋಪದ ಮೇಲೆ 20 ಎಎಪಿ ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿರುವುದು ದುರದೃಷ್ಟಕರ ಮತ್ತು ದುಃಖಕರ ಸಂಗತಿ ಎಂದು ಆಪ್ ನಾಯಕ ಕುಮಾರ್ ವಿಶ್ವಾಸ್ ಅವರು ಶನಿವಾರ ಹೇಳಿದ್ದಾರೆ.
'ಇದು ಅತ್ಯಂತ ದುರದೃಷ್ಟಕರ ಮತ್ತು ದುಃಖದ ವಿಚಾರ. ಈ ಹಿಂದೆ ಆಪ್ ಶಾಸಕರನ್ನು ಸಂಸದೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡುವ ವಿಚಾರದಲ್ಲಿ ನಾನು ಕೆಲವು ಸಲಹೆಗಳನ್ನು ನೀಡಿದ್ದೆ. ಆದರೆ ಅದು ಮುಖ್ಯಮಂತ್ರಿಗಳ ಪರಮಾಧಿಕಾರ ಎಂದು ಹೇಳಿದ್ದರಿಂದ ನಾನು ಸುಮ್ಮನಾಗಿದ್ದೆ' ಎಂದು ಕುಮಾರ್ ವಿಶ್ವಾಸ್ ತಿಳಿಸಿದ್ದಾರೆ.
ಈ ಮಧ್ಯೆ, ಆಮ್ ಆದ್ಮಿ ಶಾಸಕರ ಲಾಭದಾಯಕ ಹುದ್ದೆ ವಿರುದ್ಧ ವಿರುದ್ಧ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದ ಪ್ರಶಾಂತ್ ಪಟೇಲ್ ಅವರು, 20 ಶಾಸಕರನ್ನು ಅನರ್ಹಗೊಳಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿರುವ  ಚುನಾವಣಾ ಆಯೋಗದ ನಿರ್ಧಾರ ತಮಗೆ ತೃಪ್ತಿ ತಂದಿದೆ ಎಂದಿದ್ದಾರೆ.
ಚುನಾವಣಾ ಆಯೋಗ ನಿನ್ನೆ ಲಾಭದಾಯಕ ಹುದ್ದೆ ಹೊಂದಿರುವ 20 ಎಎಪಿ ಶಾಸಕರನ್ನು ಅನರ್ಹಗೊಳಿಸುವಂತೆ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರಿಗೆ ಶಿಫಾರಸು ಮಾಡಿದೆ. ಇದನ್ನು ಪ್ರಶ್ನಿಸಿ ಆಪ್ ಶಾಸಕರು ದೆಹಲಿ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದು, ಹೈಕೋರ್ಟ್ ಆಯೋಗದಿಂದ ವರದಿ ಕೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕೊಡಿ...ಆಶೀರ್ವಾದ.. ಸಿದ್ದರಾಮಯ್ಯ ಕಾಲಿಗೆ ಬಿದ್ದ ಡಿ ಕೆ ಶಿವಕುಮಾರ್.. ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್-Photos

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT