ದೇಶ

ಮೋದಿಯವರ ಕಳಂಕರಹಿತ ವರ್ಚಸ್ಸಿನಿಂದಾಗಿ ಬಿಜೆಪಿ ಸೋಲುವುದು ಅಸಾಧ್ಯ: ಪ್ರಕಾಶ್ ಅಂಬೇಡ್ಕರ್

Manjula VN
ಮುಂಬೈ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭ್ರಷ್ಟಾಚಾರ ರಹಿತ ವರ್ಚಸ್ಸನ್ನು ಹೊಂದಿದ್ದು, ಹೀಗಾಗಿ ಬಿಜೆಪಿ ಮಣಿಸುವುದು ಅಸಾಧ್ಯ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೊಮ್ಮಗ ಹಾಗೂ ದಲಿತ ಮುಖಂಡ ಪ್ರಕಾಶ್ ಅಂಬೇಡ್ಕರ್ ಅವರು ಶುಕ್ರವಾರ ಹೇಳಿದ್ದಾರೆ. 
ಮುಂಬೈ ಮರಾಠಿ ಪತ್ರಕರ್ತರ ಸಂಘ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭ್ರಷ್ಟಾಚಾರ ರಹಿತ ವ್ಯಕ್ತಿತ್ವ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲಿದೆ. 2018ರ ಡಿಸೆಂಬರ್ ನಲ್ಲಿ ಮಧ್ಯಪ್ರದೇಶ, ರಾಜಸ್ತಾನ ಮತ್ತು ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಜೊತೆಗೆ ಲೋಕಸಭೆ ಚುನಾವಣೆ ನಡೆಸುವ ಆಯ್ಕೆಯನ್ನು ಬಿಜೆಪಿ ಆಯ್ದುಕೊಳ್ಳಲಿದೆ ಎಂದು ಹೇಳಿದ್ದಾರೆ. 
ಪ್ರಧಾನಿ ಮೋದಿ ತಪ್ಪುಗಳನ್ನು ಮಾಡಿರಬಹುದು. ಆದರೆ, ಭ್ರಷ್ಟಾಚಾರ ರಹಿತ ವ್ಯಕ್ತಿತ್ವವನ್ನು ಹೊಂದಿದ್ದಾರೆ. ಮೋದಿ ತಮ್ಮ ಭಾಷಣದಲ್ಲಿ ಕಾಂಗ್ರೆಸ್ ನ ಹುಳುಕುಗಳನ್ನು ಎತ್ತಿತೋರಿಸುತ್ತದೆ. ಅದನ್ನು ಎದುರಿಸುವುದು ಕಾಂಗ್ರೆಸ್"ಗೆ ಸಾಧ್ಯವಿಲ್ಲ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಒಳ್ಳೆಯ ನಡತೆಯನ್ನು ಹೊಂದಿದ್ದಾರೆ. ಆದರೆ, ಕಾಂಗ್ರೆಸ್'ನ ಇತರ ನಾಯಕರಿಗೆ ಇಂತಹ ವ್ಯಕ್ತಿತ್ವ ಇಲ್ಲ. ಹೀಗಾಗಿ ಬಿಜೆಪಿಯನ್ನು ಸೋಲುವುದು ಕಾಂಗ್ರೆಸ್ ಗೆ ಸಾಧ್ಯವಾಗುತ್ತಿಲ್ಲ. 2024ರವರೆಗೆ ಬಿಜೆಪಿ ಮಣಿಸಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವೇ ಇಲ್ಲ ಎಂದು ತಿಳಿಸಿದ್ದಾರೆ. 
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎಡಪಕ್ಷಗಳು ಬಿಜೆಪಿ ವಿರುದ್ಧ ಮಹಾಮೈತ್ರಿ ಮಾಡಿಕೊಂಡು ಒಗ್ಗಟ್ಟಾಗಿ ಹೋರಾಡಿದರೆ ರಾಜಕೀಯ ಚಿತ್ರಣ ಬದಲಾಗಬಹುದು. ಎಡ ಪಕ್ಷಗಳು ಮೋದಿ ಅವರ ಭ್ರಷ್ಟಾಚಾರ ರಹಿತ ವ್ಯಕ್ತಿತ್ವಕ್ಕೆ ಸಾಟಿಯಾಗಬಲ್ಲವು. ಎಡರಂಗ ತನ್ನ ವಿಶ್ವಾಸಾರ್ಹತೆಯನ್ನು ಹಾಗೆಯೇ ಉಳಿಸಿಕೊಂಡಿದೆ. ಒಂದು ವೇಲೆ ಹೀಗೇನಾದರೂ ಆದರೆ, ಬಿಜೆಪಿ ಸಂಖ್ಯೆ ಈಗ ಕಾಂಗ್ರೆಸ್ ಹೊಂದಿರುವ ಸಂಖ್ಯೆಗೆ ಕುಸಿಯಬಹುದು. ಕರ್ನಾಟಕ ಚುನಾವಣಾ ಭವಿಷ್ಯ ದೆಹಲಿಯಲ್ಲಿ ಮುಂದಿನ ಸರ್ಕಾರವನ್ನು ನಿರ್ಧರಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 
SCROLL FOR NEXT