ಸಾಂದರ್ಭಿಕ ಚಿತ್ರ 
ದೇಶ

ಹೈದರಾಬಾದ್: ಚಲಿಸುತ್ತಿದ್ದ ಶಾಲಾ ವಾಹನದಿಂದ ಬಿದ್ದು 4 ವರ್ಷದ ಬಾಲಕಿ ಸಾವು

ಚಲಿಸುತ್ತಿದ್ದ ಶಾಲಾ ಬಸ್ ನಿಂದ ಕೆಳಗೆ ಬಿದ್ದು ನಾಲ್ಕು ವರ್ಷದ ಬಾಲಕಿಯೊಬ್ಬಲು ಮೃತಪಟ್ಟಿರುವ ಘಟನೆ ಹೈದರಾಬಾದ್'ನ ಸಾಹೇಬ್ ನಗರದಲ್ಲಿ ಶನಿವಾರ ನಡೆದಿದೆ...

ಹೈದರಾಬಾದ್: ಚಲಿಸುತ್ತಿದ್ದ ಶಾಲಾ ಬಸ್ ನಿಂದ ಕೆಳಗೆ ಬಿದ್ದು ನಾಲ್ಕು ವರ್ಷದ ಬಾಲಕಿಯೊಬ್ಬಲು ಮೃತಪಟ್ಟಿರುವ ಘಟನೆ ಹೈದರಾಬಾದ್'ನ ಸಾಹೇಬ್ ನಗರದಲ್ಲಿ ಶನಿವಾರ ನಡೆದಿದೆ. 
ಅಂಜಲಿ (4) ಮೃತಪಟ್ಟ ಬಾಲಕಿಯಾಗಿದ್ದಾಳೆ. ಪ್ರಶಾಂತಿ ವಿದ್ಯಾ ನಿಕೇತನ್ ಶಾಲೆಯ ವಿದ್ಯಾರ್ಥಿಗಳನ್ನು ಸಾಹೇಬ್ ನಗರದಿಂದ ಬಸ್ಸಿನಲ್ಲಿ ಶಾಲೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಶಾಲೆ ತಲುಪಲು ಇನ್ನು 10 ನಿಮಿಷ ಇರುವಾಗ ದುರ್ಘಟನೆ ನಡೆದಿದೆ. 
ಬಸ್ಸಿನ ಬಾಗಿಲನ್ನು ಹಾಕಿರಲಿಲ್ಲ. ಬಾಲಕಿ ಬಸ್ಸಿನ ದ್ವಾರದ ಬಳಿ ನಿಂತು, ಆಟವಾಡುತ್ತಿದ್ದಳು. ಚಾಲಕ ಬ್ರೇಕ್ ಹಾಕುತ್ತಿದ್ದಂತೆಯೇ ಬಾಲಕಿ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ಬಾಲಕಿಯ ತಲೆ ವಾಹನದ ಚಕ್ರಕ್ಕೆ ಸಿಕ್ಕಿಹಾಕಿಕೊಂಡಿದೆ. ಕೂಡಲೇ ಚಾಲಕ ಸ್ಥಳೀಯರ ಸಹಾಯದೊಂದಿಗೆ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ. ಆದರೆ, ಅಷ್ಟರಲ್ಲಾಗಲೇ ಬಾಲಕಿ ಮೃತಪಟ್ಟಿದ್ದಾಳು ಎಂದು ಪೊಲೀಸರು ಹೇಳಿದ್ದಾರೆ. 
ಪ್ರಸ್ತುತ ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿರುವ ಪೊಲೀಸರು, ಚಾಲಕನ ವಿರುದ್ಧ ನಿರ್ಲಕ್ಷ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!