ಮೋದಿ ಮನ್ ಕೀ ಬಾತ್ ನಲ್ಲಿ ಮೂರು ವಿಷಯ ಹಂಚಿಕೊಳ್ಳುವಂತೆ ರಾಹುಲ್ ಗಾಂಧಿ ಟಾಂಗ್
ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಆಕಾಶವಾಣಿ ಕಾರ್ಯಕ್ರಮ ಮನ್ ಕೀ ಬಾತ್ ನಲ್ಲಿ ಪ್ರಮುಖವಾದ ಮೂರು ವಿಷಯಗಳ ಬಗ್ಗೆ ಹಂಚಿಕೊಳ್ಳುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟಾಂಗ್ ನೀಡಿದ್ದಾರೆ.
ದೆಹಲಿ: ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಆಕಾಶವಾಣಿ ಕಾರ್ಯಕ್ರಮ ಮನ್ ಕೀ ಬಾತ್ ನಲ್ಲಿ ಪ್ರಮುಖವಾದ ಮೂರು ವಿಷಯಗಳ ಬಗ್ಗೆ ಹಂಚಿಕೊಳ್ಳುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟಾಂಗ್ ನೀಡಿದ್ದಾರೆ.
ಉದ್ಯೋಗ ಸೃಷ್ಠಿ , ಡೋಕ್ಲಾಮದಿಂದ ಚೀನಾ ಓಡಿಸಲು ಕೈಗೊಂಡಿರುವ ಕ್ರಮಗಳು ಹಾಗೂ ಹರಿಯಾಣದಲ್ಲಿನ ಅತ್ಯಾಚಾರದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳುವಂತೆ ರಾಹುಲ್ ಗಾಂಧಿ ಟ್ವಿಟ್ ಮಾಡಿದ್ದಾರೆ.
ಜನವರಿ 28 ರ ಮನ್ ಕೀ ಬಾತ್ ಆವೃತ್ತಿಯಲ್ಲಿ ಜನರು ತಮ್ಮ ಸಲಹೆ, ಅಭಿಪ್ರಾಯ ಹಂಚಿಕೊಳ್ಳುವಂತೆ ಪ್ರಧಾನಿ ಮೋದಿ ಟ್ವಿಟ್ ಮರುದಿನವೇ ರಾಹುಲ್ ಗಾಂಧಿ ಟ್ವಿಟ್ ಮಾಡಿದ್ದು, ಮೋದಿ ತಮ್ಮ ಜ್ಞಾನದಂತೆ ಮಾತನಾಡುತ್ತಿದ್ದಾರೆ ಆದರೆ, ಜನರಿಗೆ ಮಾತ್ರ ಕೇಳಿಸುತ್ತಿಲ್ಲ ಎಂದು ಆಪಾದಿಸಿದ್ದಾರೆ.
ಡೋಕ್ಲಾಮದಿಂದ ಚೀನಾ ಓಡಿಸುವಂತೆ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.ಡೋಕ್ಲಾಮದಲ್ಲಿ ಚೀನಾ ಕಟ್ಟಡ ಕಾಮಗಾರಿ ನಡೆಸುತ್ತಿದೆ ಎಂಬ ವರದಿ ಬೆನ್ನಲ್ಲೇ ರಾಹುಲ್ ಗಾಂಧಿ ಹೇಳಿಕೆ ಹೊರಬಿದ್ದಿದ್ದು, ಈ ವಿಚಾರದಲ್ಲಿ ಭಾರತ- ಚೀನಾ ಕಳೆದೊಂದು ವರ್ಷದಿಂದ ದೋಕಾ ರೀತಿಯಲ್ಲಿ ವರ್ತಿಸುತ್ತಿವೆ ಎಂದು ಅವರು ಟೀಕಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.