ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ( ಸಾಂದರ್ಭಿಕ ಚಿತ್ರ) 
ದೇಶ

ರಾಹುಲ್ ಗಾಂಧಿ ನಾಯಕತ್ವದಲ್ಲಿ ಸಾರ್ವತ್ರಿಕ ಚುನಾವಣೆ ಗೆದ್ದು ಅಧಿಕಾರಕ್ಕೆ ಬರುತ್ತೇವೆ:ಅಹ್ಮದ್ ಪಟೇಲ್

senior Congress leader Ahmed Patel said today and exuded confidence that the party would emerge victorious in the 2019 general elections under Rahul Gandhi's leadership.

ನವದೆಹಲಿ:  ಗುಜರಾತ್ ವಿಧಾನಸಭಾ ಚುನಾವಣಾ ಫಲಿತಾಂಶ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ತುಂಬಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎದುರಿಸಲಾಗುವುದು ಎಂದು ಸೋನಿಯಾಗಾಂಧಿ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರಮೋದಿ ಅವರ ತವರು ರಾಜ್ಯದಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ನೈತಿಕವಾಗಿ ಗೆದ್ದಿದೆ. ಗುಜರಾತ್ ಚುನಾವಣಾ ಫಲಿತಾಂಶ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದ್ದು, ಗುಜರಾತ್ ಮಾತ್ರವಲ್ಲ ಇಡೇ ದೇಶದಲ್ಲಿ ಗೆಲ್ಲುತ್ತೇವೆ , ಬಿಜೆಪಿಯನ್ನು ಸೋಲಿಸುತ್ತೇವೆ ಎಂಬ ನಂಬಿಕೆ ಇರುವುದಾಗಿ ಅಹ್ಮದ್ ಪಟೇಲ್ ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

 ಮುಂಬರುವ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲೂ ಯುವ ನಾಯಕ , ರಾಹುಲ್ ಗಾಂಧಿ ನಾಯಕತ್ವದಲ್ಲಿ ಚುನಾವಣೆ ಎದುರಿಸಿ ಅಧಿಕಾರದ ಚುಕ್ಕಾಣಿ ಹಿಡಿಯುವುದಾಗಿ ಹೇಳಿದ್ದಾರೆ.

 ಲೋಕಸಭಾ ಚುನಾವಣೆಗಾಗಿ  ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ  ಮಾಡಿಕೊಳ್ಳಲಾಗುವುದು, ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಹಿರಿಯ ಮುಖಂಡರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಅಹ್ಮದ್ ಪಟೇಲ್ ತಿಳಿಸಿದ್ದಾರೆ.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT