ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಜ್ಡುಗುಜ್ಜಾಗಿರುವ ಆಟೋ ದೃಶ್ಯ 
ದೇಶ

ಕಾಸರಗೋಡು ಬಳಿ ಭೀಕರ ರಸ್ತೆ ಅಪಘಾತ:ತಾಯಿ, ಮಗಳು ಸಾವು

ಕೇರಳ ರಾಜ್ಯದ ಕಾಸರಗೋಡು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.ಆಟೋ ರಿಕ್ಷಾಗೆ ಟ್ರಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ತಾಯಿ ಹಾಗೂ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಕಾಸರಗೋಡು : ಕೇರಳ ರಾಜ್ಯದ ಕಾಸರಗೋಡು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.ಪೊಯ್ ನಾಚಿಯ ಹತ್ತಿರ  ರಾಷ್ಟ್ರೀಯ ಹೆದ್ದಾರಿಯಲ್ಲಿ  ಇಂದು ಮುಂಜಾನೆ ಆಟೋ ರಿಕ್ಷಾಗೆ ಟ್ರಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ತಾಯಿ ಹಾಗೂ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಮೃತರನ್ನು ಶೋಭಾ ಹಾಗೂ ಆಕೆಯ ಮಗಳು ವಿಸ್ಮಯ ಎಂದು ಗುರುತಿಸಲಾಗಿದೆ. ರಬ್ಬರ್ ಸೀಟ್ ತುಂಬಿಕೊಂಡು ಬರುತ್ತಿದ್ದ ಮಹಾರಾಷ್ಟ್ರ ನೋಂದಣಿಯ ಟ್ರಕ್ ನಿಯಂತ್ರಣ ಕಳೆದುಕೊಂಡು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

 ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಸಂಪೂರ್ಣವಾಗಿ ಜಖಂಗೊಂಡಿದೆ. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು , ಆಟೋದೊಳಗೆ ಸಿಲುಕಿಕೊಂಡಿದ್ದ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ.  ಆಟೋ ಚಾಲಕ ಹಾಗೂ ಟ್ರಕ್ ಕ್ಲಿನರ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಟ್ರಕ್ ಚಾಲಕವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

SCROLL FOR NEXT