ದೆಹಲಿಯ ಎಎಪಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (ಸಾಂದರ್ಭಿಕ) ಚಿತ್ರ 
ದೇಶ

ಕೇಜ್ರಿವಾಲ್ ಗೆ ಭಾರಿ ಮುಖಭಂಗ: 20 ಶಾಸಕರ ಅನರ್ಹತೆ ಶಿಫಾರಸ್ಸಿಗೆ ರಾಷ್ಟ್ರಪತಿ ಕೋವಿಂದ್ ಅಂಕಿತ

ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿ ಆಮ್ ಆದ್ಮಿ ಸರ್ಕಾರದ 20 ಮಂದಿ ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಮಾಡಿದ್ದ ಶಿಫಾರಸ್ಸಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್..

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ  ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರದ 20 ಮಂದಿ ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಮಾಡಿದ್ದ ಶಿಫಾರಸ್ಸಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಅಂಕಿತ ಹಾಕಿದ್ದಾರೆ. 

ಲಾಭದಾಯಕ ಹುದ್ದೆಯನ್ನು ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಈ ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಶುಕ್ರವಾರ ರಾಷ್ಟ್ರಪತಿಗೆ ಶಿಫಾರಸ್ಸು ಮಾಡಿತ್ತು.

2015 ಮಾರ್ಚ್ 13 ರಿಂದ ಸೆಪ್ಟೆಂಬರ್ 8 2016ರವರೆಗೆ ಈ ಶಾಸಕರು ಸಂಸದೀಯ ಕಾರ್ಯದರ್ಶಿ ಹುದ್ದೆಯನ್ನು ಲಾಭದಾಯಕವಾಗಿ ಹೊಂದಿದ್ದರು. ಇದರಿಂದಾಗಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಚುನಾವಣಾ ಆಯೋಗ ಶಿಫಾರಸ್ಸಿನಲ್ಲಿ ಹೇಳಿತ್ತು, ಆದರೆ, ಈ ಶಾಸಕರು ಯಾವುದೇ ಸಂಬಳ, ಸವಲತ್ತು ಪಡೆದಿಲ್ಲ ಎಂದು ಆಮ್ ಆದ್ಮಿ ಪಕ್ಷ ವಾದಿಸಿತ್ತು.

ರಾಷ್ಟ್ರಪತಿಗಳ ಅಂಕಿತದಿಂದಾಗಿ  ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಭಾರಿ ಮುಖಭಂಗವಾಗಿದ್ದು, ಶೀಘ್ರದಲ್ಲಿಯೇ ಉಪಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!