ದೇಶ

ಇಂಧನ ಬೆಲೆ ಏರಿಸಿ ಸರ್ಕಾರ ಗ್ರಾಹಕ ವಿರೋಧಿ ಕ್ರಮ ಅನುಸರಿಸುತ್ತಿದೆ: ಪಿ.ಚಿದಂಬರಂ

Sumana Upadhyaya
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಇಂಧನಗಳ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗ್ರಾಹಕ ವಿರೋಧಿ ಕ್ರಮ ಹೊಂದಿದೆ ಎಂದು ಕೇಂದ್ರ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಆರೋಪಿಸಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ನ್ನು ಸರಕು ಮತ್ತು ಸೇವಾ ತೆರಿಗೆಯಡಿ ತರುವ ಮೂಲಕ ಗ್ರಾಹಕರಿಗೆ ನಿರಾಳತೆ ಒದಗಿಸಬೇಕು ಎಂದು ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಆಕಾಶದೆತ್ತರಕ್ಕೆ ಏರುತ್ತಿದೆ. ಈ ಮೂಲಕ ಸರ್ಕಾರ ಗ್ರಾಹಕರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಇದು ಸಂಪೂರ್ಣ ಗ್ರಾಹಕ ವಿರೋಧಿಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ನ್ನು ಬೇರೆ ತೆರಿಗೆ ಪಾವತಿ ವ್ಯಾಪ್ತಿಗೆ ತರಲಾಗಿದೆ. ಹಣವನ್ನು ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
SCROLL FOR NEXT