ಕಾಂಗ್ರೆಸ್ ವಕ್ತಾರೆ ಸುಷ್ಮಿತಾ ದೇವ್ 
ದೇಶ

ಹರ್ಯಾಣ ಭಾರತದ ರೇಪ್ ರಾಜಧಾನಿ, ಸಿಎಂ ಖಟ್ಟರ್ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಹರ್ಯಾಣವನ್ನು ಭಾರತದ ರೇಪ್ ರಾಜಧಾನಿ ಎಂದು ಆರೋಪ ಮಾಡಿರುವ ಕಾಂಗ್ರೆಸ್ ಸಿಎಂ ಮನೋಹರ್ ಲಾಲ್ ಖಟ್ಟರ್ ಸರ್ಕಾರ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ನವದೆಹಲಿ: ಹರ್ಯಾಣವನ್ನು ಭಾರತದ ರೇಪ್ ರಾಜಧಾನಿ ಎಂದು ಆರೋಪ ಮಾಡಿರುವ ಕಾಂಗ್ರೆಸ್ ಸಿಎಂ ಮನೋಹರ್ ಲಾಲ್ ಖಟ್ಟರ್ ಸರ್ಕಾರ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. 
ಪ್ರತಿ ದಿನ ಹರ್ಯಾಣದಲ್ಲಿ ಅತ್ಯಾಚಾರವಾಗುತ್ತಿರುವ ವರದಿಗಳನ್ನು ಗಮನಿಸಿದರೆ ಹರ್ಯಾಣ ಭಾರತದ ರೇಪ್ ರಾಜಧಾನಿ ಎನಿಸಲು ಪ್ರಾರಂಭವಾಗಿದೆ ಎಂದು ಕಾಂಗ್ರೆಸ್ ವಕ್ತಾರೆ ಸುಷ್ಮಿತಾ ದೇವ್ ಹೇಳಿದ್ದಾರೆ. ಇದಕ್ಕಿಂತ ಘೋರವಾದುದ್ದೇನೆಂದರೆ ಹರ್ಯಾಣ ಮುಖ್ಯಮಂತ್ರಿಗಳು ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಕಾಂಗ್ರೆಸ್ ವಿರುದ್ಧವೇ ಆರೋಪಗಳನ್ನು ಹೊರಿಸಲು ಯತ್ನಿಸುತ್ತಿದ್ದಾರೆ ಎಂದು ಸುಷ್ಮಿತಾ ದೇವ್ ಆರೋಪಿಸಿದ್ದಾರೆ. 
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಭೂಪೇಂದರ್ ಸಿಂಗ್ ಹೂಡಾ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಲಿರುವ ಕಾಂಗ್ರೆಸ್ ನಾಯಕರು ಅತ್ಯಾಚಾರ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡುವಂತೆ ಮನವಿ ಮಾಡಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ