ನವದೆಹಲಿ: ಮಹಿಳೆಯ ಒಪ್ಪಿಗೆ ಇಲ್ಲದೇ ಯಾರೂ ಆಕೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಲೈಂಗಿಕತೆಗಾಗಿ ಪುರುಷರಿಂದ ಮಹಿಳೆಯರು ಬಲಿಪಶುಗಳಾಗುತ್ತಿರುವುದು ದುರದೃಷ್ಟಕರ ಎಂದು ಕೋರ್ಟ್ ಹೇಳಿದ್ದಾರೆ. 9 ವರ್ಷದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಿರುವ ವೇಳೆ ದೆಹಲಿ ಕೋರ್ಟ್, ಮಹಿಳೆಯ ಒಪ್ಪಿಗೆ ಇಲ್ಲದೇ ಯಾರೂ ಆಕೆಯನ್ನು ಮುಟ್ಟುವಂತಿಲ್ಲ ಎಂದು ಹೇಳಿದೆ.
ಉತ್ತರ ಪ್ರದೇಶದ ನಿವಾಸಿಯಾಗಿರುವ ಚವಿ ರಾಮ್ 9 ವರ್ಷದ ಬಾಲಕಿಯೊಂದಿಗೆ ಅಸಭ್ಯ ವರ್ತನೆ ತೋರಿದ್ದು, ಮಹಿಳೆಯನ್ನು ಆಕೆಯ ಅನುಮತಿ ಇಲ್ಲದೇ ಯಾವುದೇ ಕಾರಣಕ್ಕೂ ಯಾರೂ ಮುಟ್ಟುವಂತಿಲ್ಲ ಎಂದು ಕೋರ್ಟ್ ಹೇಳಿದೆ.