ಪಾಕಿಸ್ತಾನ ನಡೆಸಿದ ಅಪ್ರಚೋದಿತ ಶೆಲ್ ದಾಳಿಗೆ ಹಾನಿಗೊಂಡಿರುವ ತಮ್ಮ ಮನೆಯನ್ನು ಪರಿಶೀಲಿಸುತ್ತಿರುವ ಗ್ರಾಮಸ್ಥರು 
ದೇಶ

ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕ್: ಓರ್ವ ನಾಗರೀಕ ಸಾವು, 3 ಗಾಯ

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಹಾಗೂ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ನಾಗರೀಕ ಬಲಿಯಾಗಿ ಮೂವರಿಗೆ ಗಾಯವಾಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ...

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಹಾಗೂ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ನಾಗರೀಕ ಬಲಿಯಾಗಿ ಮೂವರಿಗೆ ಗಾಯವಾಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. 
ಇದರಂತೆ ಅಂತರಾಷ್ಟ್ರೀಯ ಗಡಿ ಹಾಗೂ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದ ಉದ್ಧಟನಕ್ಕೆ ಈವರೆಗೂ 12 ಮಂದಿ ಸಾವನ್ನಪ್ಪಿದ್ದಾರೆ. 
ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಗಡಿಯಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಮತ್ತೆ ಕಳೆದ ರಾತ್ರಿ ಪಾಕಿಸ್ತಾನ ತನ್ನ ಪುಂಡಾಟವನ್ನು ಮುಂದುವರೆಸಿದ್ದು, ಗಡಿ ಭದ್ರತಾ ಪಡೆಗಳು ಹಾಗೂ ನಾಗರೀಕ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. 
ಕಳೆದ ರಾತ್ರಿ 8.30ರ ಸುಮಾರಿಗೆ ಕನಚಕ್ ಮತ್ತು ಪರ್ಗ್ವಾಲ್ ಪ್ರದೇಶಗಳಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ಹಾಗೂ ಮಾರ್ಟರ್ ಶೆಲ್ ಗಳ ದಾಳಿ ನಡೆಸಿತ್ತು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. 
ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಕನಚಕ್'ನಲ್ಲಿ ಗೋಪಾಲ್ ದಾಸ್ ಎಂಬ ನಾಗರೀಕ ಗಂಭೀರವಾಗಿ ಗಾಯಗೊಂಡಿದ್ದ. ಬಳಿಕ ಸಾವನ್ನಪ್ಪಿದ್ದ. ಇದಲ್ಲದೆ, ಆರ್.ಎಸ್.ಪುರ ಹಾಗೂ ಅರ್ನಿಯಾ ಪ್ರದೇಶಗಳಲ್ಲಿ ಮಹಿಳೆ ಸೇರಿ ಮೂವರು ಗಾಯಗೊಂಡಿದ್ದರು ಎಂದು ತಿಳಿಸಿದ್ದಾರೆ. 
ಪಾಕಿಸ್ತಾನ ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ನಾಗರೀಕ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ. ಪಾಕಿಸ್ತಾನದ ದಾಳಿಗೆ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ. ಪಾಕಿಸ್ತಾನದ ಅಪ್ರಚೋದಿಕ ಗುಂಡಿನ ದಾಳಿಯ ಪರಿಣಾಮ ಗಡಿಯಲ್ಲಿರುವ ಶಾಲೆಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮಕ್ಕಳ ಭದ್ರತಾ ಹಿತದೃಷ್ಟಿಯಿಂದಾಗಿ ಶಾಲೆಗಳನ್ನು ಬಂದ್ ಮಾಡಿಸಲಾಗಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?

1 ವರ್ಷ ಗ್ಯಾರಂಟಿ ಯೋಜನೆಗಳ ನಿಲ್ಲಿಸಿ, ಹಣವನ್ನು ರೈತರಿಗೆ ನೀಡಿ: ರಾಜ್ಯ ಸರ್ಕಾರಕ್ಕೆ ದಿಂಗಾಲೇಶ್ವರ ಶ್ರೀಗಳ ಆಗ್ರಹ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ 18 ನಿಮಿಷದಲ್ಲಿ ಜೀವಂತ ಹೃದಯ ಸಾಗಾಟ!