ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮೈತ್ರಿ ತೊರೆಯುವ ಕುರಿತು ಸಾಕಷ್ಟು ಬಾರಿ ಮಾತನಾಡಿದ್ದಾರೆ, ಚುನಾವಣೆಗೆ ಇನ್ನೂ ಸಮಯವಿದೆ: ಫಡ್ನವಿಸ್

ಬಿಜೆಪಿ ಜೊತೆಗಿನ ಮೈತ್ರಿ ತೊರೆಯುವ ಕುರಿತು ಶಿವಸೇನೆ ಸಾಕಷ್ಟು ಬಾರಿ ಮಾತನಾಡಿದೆ, ಪ್ರಸ್ತುತ ಶಿವಸೇನೆ ನೀಡಿರುವ ಹೇಳಿಕೆ ಕುರಿತು ನಾನು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲು ಇಚ್ಛಿಸುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಂಗಳವಾರ ಹೇಳಿದ್ದಾರೆ...

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್
Manjula VN
Updated On : 23 Jan 2018, 3:34 am
ದಾವೋಸ್: ಬಿಜೆಪಿ ಜೊತೆಗಿನ ಮೈತ್ರಿ ತೊರೆಯುವ ಕುರಿತು ಶಿವಸೇನೆ ಸಾಕಷ್ಟು ಬಾರಿ ಮಾತನಾಡಿದೆ, ಪ್ರಸ್ತುತ ಶಿವಸೇನೆ ನೀಡಿರುವ ಹೇಳಿಕೆ ಕುರಿತು ನಾನು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲು ಇಚ್ಛಿಸುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಂಗಳವಾರ ಹೇಳಿದ್ದಾರೆ. 
ಸ್ವಿಟ್ಡರ್ಲೆಂಡ್'ನ ದಾವೋಸ್ ನಲ್ಲಿ ನಡೆಯುತ್ತರುವ ವಿಶ್ವ ಆರ್ಥಿಕ ವೇದಿಕೆ 48ನೇ ವಾರ್ಷಿಕ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮೈತ್ರಿ ತೊರೆಯುವ ಕುರಿತು ಈ ಹಿಂದೆಯೂ ಶಿವಸೇನೆ ಸಾಕಷ್ಟು ಬಾರಿ ಹೇಳಿಕೆಯನ್ನು ನೀಡಿದೆ. ಈ ಬಗ್ಗೆ ನಾನು ಯಾವುದೇ ರೀತಿಯ ಪ್ರತಿಕ್ರಿಯೆಗಳನ್ನು ನೀಡಲು ಇಚ್ಛಿಸುವುದಿಲ್ಲ. ಬಿಜೆಪಿ ಹಾಗೂ ಶಿವಸೇನೆ ಮೈತ್ರಿ ಸರ್ಕಾರ ತನ್ನ ಅವಧಿಯನ್ನು ಪೂರ್ಣಗೊಳಿಸಲಾಗಿದೆ. ಮುಂದೆ ಕೂಡ ನಮ್ಮ ಮೈತ್ರಿ ಹೀಗೆಯೇ ಮುಂದುವರೆಯಲಿದೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ. 
ಬಿಜೆಪಿ ಜೊತೆಗಿನ ಮೈತ್ರಿ ತೊರೆದು, ಮುಂಬರುವ ಲೋಕಸಭಾ ಚುನಾವಣೆ ಮತ್ತು 2019ರ ಮಹಾರಾಷ್ಟ್ರ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತೇವೆಂದು ಶಿವಸೇನೆ ಘೋಷಣೆ ಮಾಡಿದೆ. 

Advertisement

Advertisement

ಈ ಕುರಿತಂತೆ ಮಾತನಾಡಿರುವ ಶಿವಸೇನೆ ವಕ್ತಾರ ಸಂಜತ್ ರಾವತ್ ಅವರು, 2019ರ ಲೋಕಸಭೆ ಮತ್ತು  ವಿಧಾನಸಭೆ ಚುನಾವಣೆವನ್ನು ನಾವು ಏಕಾಂಗಿಯಾಗಿ ಎದುರಿಸಲು ನಿರ್ಧರಿಸಿದ್ದೇವೆ ಎಂದು ಮಾಹಿತಿ ನೀಡಿದರು. ಅಲ್ಲದೆ ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ ಅವರು ಕಳೆದ ಮೂರು ವರ್ಷಗಳಿಂದ ಬಿಜೆಪಿ ಪಕ್ಷ ಸಿದ್ಧಾಂತಗಳ  ವಿರುದ್ಧವಾಗಿ ನಡೆಯುತ್ತಿದೆ. ಹೀಗಾಗಿ ಪಕ್ಷ ಏಕಾಂಗಿ ಸ್ಪರ್ಧಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement