ಆರೋಪಿ ಬಂಧನದ (ಸಾಂದರ್ಭಿಕ ಚಿತ್ರ) 
ದೇಶ

ದೆಹಲಿಯಲ್ಲಿ ಕನ್ನಡದ ಚಿತ್ರ ನಿರ್ಮಾಪಕ, ನಟ ಸೋಮಶೇಖರ್ ಬಂಧನ

ಗೃಹ ಸಚಿವಾಲಯದ ಹಿರಿಯ ಅಧಿಕಾರಿ ಎಂದು ನಂಬಿಸಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ಕರ್ನಾಟಕದ ಚಿತ್ರ ನಿರ್ಮಾಪಕ, ನಟನೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ದೆಹಲಿ:  ಗೃಹ ಸಚಿವಾಲಯದ ಹಿರಿಯ ಅಧಿಕಾರಿ ಎಂದು ನಂಬಿಸಿ ಸಾರ್ವಜನಿಕರನ್ನು ವಂಚಿಸುತ್ತಿದ್ದ  ಕರ್ನಾಟಕದ ಚಿತ್ರ ನಿರ್ಮಾಪಕ, ನಟನೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ನಿವಾಸಿ ಕೆ. ಸೋಮಶೇಖರ್ ಬಂಧಿತ ಆರೋಪಿ. ಗೃಹ ಸಚಿವಾಲಯದ ಉಪ ಕಾರ್ಯದರ್ಶಿ ಸಲ್ಲಿಸಿದ್ದ ದೂರಿನ ಅನ್ವಯ ವಿಶೇಷ ತನಿಖೆ ನಡೆಸಿದ ದೆಹಲಿ ಪೊಲೀಸರು ,ಸೋಮಶೇಖರ್ ಸಹಿ ಇರುವ ಪತ್ರ, ಮತ್ತಿತರ ದಾಖಲೆಗಳನ್ನು  ಪರಿಶೀಲನೆ ನಡೆಸಲಾಗಿದ್ದು,ಅದು ನಕಲಿ ಎಂಬುದು ತಿಳಿದುಬಂದಿದೆ. ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಸೋಮಶೇಖರ್  ರಾಷ್ಟ್ರೀಯ ಲಾಂಛನವಿರುವ ಲೆಟರ್ ಹೆಡ್ ನಲ್ಲಿ ಪ್ರಧಾನಿ ನರೇಂದ್ರಮೋದಿಗೆ ಪತ್ರ ಬರೆದಿರುವುದು ತನಿಖೆ ವೇಳೆ  ಬೆಳಕಿಗೆ ಬಂದಿದೆ ಎಂದು ಪೊಲೀಸರು  ಹೇಳಿದ್ದಾರೆ.

ಯಲಹಂಕ ಬಳಿ ಹಲವರು ಎಕರೆ ಜಮೀನು ಹೊಂದಿರುವ ಸೋಮಶೇಖರ್, ಚಿತ್ರೋದ್ಯಮ ಪ್ರವೇಶಿಸಿ ಮೂರು ಸಿನಿಮಾನಗಳನ್ನು ನಿರ್ಮಾಣ ಮಾಡಿದ್ದಾರೆ. ಒಂದು ಚಿತ್ರದಲ್ಲಿ ಖಳನಾಯಕನ ಪಾತ್ರದಲ್ಲಿಯೂ ಅಭಿನಯಿಸಿದ್ದಾರೆ. ಆದರೆ, ಆ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ನಷ್ಟ ಅನುಭವಿಸಿದ್ದರಿಂದ ಸುಲಭವಾಗಿ ಹಣ ಗಳಿಸುವ ದೃಷ್ಟಿಯಿಂದ ವಂಚನೆ ಮಾರ್ಗ ಹಿಡಿದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!