ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಾಡಹಗಲೇ ಶಾಲಾ ಬಾಲಕನೊಬ್ಬನ ಅಪಹರಣವಾಗಿದೆ. ಒಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅಪಹರಣ ಮಾಡಿದ್ದಾರೆ.
ಷಾದ್ರಾ ನಗರದ ಐಬಿಹೆಚ್ ಎಎಸ್ ಆಸ್ಪತ್ರೆ ಬಳಿ ಇಂದು ಬೆಳಿಗ್ಗೆ 8 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದೆ. ಶಾಲಾ ಬಸ್ಸನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು,ಬಸ್ಸಿನ ಚಾಲಕನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ವಿದ್ಯಾರ್ಥಿಯನ್ನು ಅಪಹರಿಸಿ ಪರಾರಿಯಾಗಿದ್ದಾರೆ.
ಉತ್ತರ ಪ್ರದೇಶದ ಕಡೆಯಿಂದ ಕಪ್ಪು ಬಣ್ಣದ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಾಲಕನನ್ನು ಅಪಹರಿಸಿದ್ದಾರೆ ಎಂದು ಪ್ರತ್ಯೇಕ್ಷದರ್ಶಿಗಳು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.