ಸಂಗ್ರಹ ಚಿತ್ರ 
ದೇಶ

69ನೇ ಗಣರಾಜ್ಯೋತ್ಸವ‌‌: ರಾಹುಲ್‌ ಗಾಂಧಿಗೆ 4ನೇ ಸಾಲಿನಲ್ಲಿ ಸ್ಥಾನ, ಕಾಂಗ್ರೆಸ್ ನಾಯಕರ ಕಿಡಿ

69ನೇ ಗಣರಾಜ್ಯೋತ್ಸವ ನಿಮಿತ್ತ ದೆಹಲಿಯಲ್ಲಿ ಆಯೋಜನೆಯಾಗಿರುವ ಪಥಸಂಚಲನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ನಾಲ್ಕನೇ ಸಾಲಿನಲ್ಲಿ ಆಸನ ನೀಡಿರುವುದಕ್ಕೆ ಕಾಂಗ್ರೆಸ್ ಪಕ್ಷ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ನವದೆಹಲಿ: 69ನೇ ಗಣರಾಜ್ಯೋತ್ಸವ ನಿಮಿತ್ತ ದೆಹಲಿಯಲ್ಲಿ ಆಯೋಜನೆಯಾಗಿರುವ ಪಥಸಂಚಲನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ನಾಲ್ಕನೇ ಸಾಲಿನಲ್ಲಿ ಆಸನ ನೀಡಿರುವುದಕ್ಕೆ ಕಾಂಗ್ರೆಸ್ ಪಕ್ಷ  ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಹಿಂದಿನ ಗಣರಾಜ್ಯೋತ್ಸವಗಳಲ್ಲಿ ಕಾಂಗ್ರೆಸ್‌ ಅಧ್ಯಕ್ಷರಿಗೆ ಮೊದಲ ಸಾಲಿನಲ್ಲಿ ಸ್ಥಳ ನಿಗದಿ ಮಾಡಲಾಗುತ್ತಿತ್ತು. ಆದರೆ ಪ್ರಧಾನಿ ಮೋದಿ ಸರ್ಕಾರ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದು, ಇದೇ ಕಾರಣಕ್ಕೆ ರಾಹುಲ್‌ ಅವರಿಗೆ  ಅಗೌರವ ತೋರವು ಉದ್ದೇಶದಿಂದ ಅವರಿಗೆ ನಾಲ್ಕನೇ ಸಾಲಿನಲ್ಲಿ ಸ್ಥಾನ ನಿಗದಿ ಮಾಡಿದ್ದಾರೆ. ಆದರೂ ಕೂಡ ರಾಹುಲ್ ಗಾಂಧಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಮೂಲಗಳು ತಿಳಿಸಿವೆ.
ಇನ್ನು ಭಾರತಕ್ಕೆ ಸ್ವಾತಂತ್ರ್ಯ ದೊರೆತ ನಂತರದಿಂದಲೂ  ಕಾಂಗ್ರೆಸ್ ಪಕ್ಷದ ಅಧ್ಯಕ್ಷರಿಗೆ ಮೊದಲ ಸಾಲಿನಲ್ಲಿ ಆಸನವನ್ನು ಕಾಯ್ದಿರಿಸಲಾಗುತ್ತಿತ್ತು. ಈ ಹಿಂದೆ ಸೋನಿಯಾ ಗಾಂಧಿ ಎಐಸಿಸಿ ಅಧ್ಯಕ್ಷೆಯಾಗಿದ್ದಾಗಲೂ ಅವರಿಗೆ ಮೊದಲ  ಸಾಲಿನಲ್ಲಿ ಸ್ಥಾನ ಕಲ್ಪಿಸಲಾಗುತ್ತಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರಿಗೂ ಕೂಡ ಬಿಜೆಪಿ ಅಧಿಕಾರಕ್ಕೆ ಬಂದ 2014ರಿಂದಲೂ ಮೊದಲ ಸಾಲಿನಲ್ಲಿ ಆಸನವನ್ನು ಕಾಯ್ದಿರಿಸಲಾಗುತ್ತಿದೆ. ರಾಜಕೀಯ ನಾಯಕರಿಗೆ ಮತ್ತು  ಕೇಂದ್ರ ಸಚಿವರಿಗೆ ಯಾವ ಸಾಲಿನಲ್ಲಿ ಸ್ಥಾನ ಕಲ್ಪಿಸಲಾಗಿದೆ ಎಂಬುದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ ಎಂದು ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT