ನಾನಿ 
ದೇಶ

ಹೈದರಾಬಾದ್: ತೆಲುಗಿನ ಖ್ಯಾತ ನಟ ನಾನಿ ಕಾರ್ ಅಪಘಾತ, ಸಣ್ಣ ಪುಟ್ಟ ಗಾಯ

ತೆಲುಗು ಚಿತ್ರರಂಗದ ಖ್ಯಾತ ನಟ ನಾನಿ ಕಾರ್ ಅಪಘಾತದಲ್ಲಿ ಗಾಯಗೊಂಡಿದ್ದಾರೆ.

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ನಾನಿ ಕಾರ್ ಅಪಘಾತದಲ್ಲಿ ಗಾಯಗೊಂಡಿದ್ದಾರೆ. 
ಶುಕ್ರವಾರ ಸಂಜೆ ಸುಮಾರು 4.30ಕ್ಕೆ ಈ ಅಪಘಾತ ಸಂಭವಿಸಿದ್ದು ಜುಬಿಲೀ ಹಿಲ್ಸ್ ನಿಂದ ಗ್ಯಾಚಿಬೋನ್ಸ್ ಗೆ ತೆರಳುವಾಗ ಈ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ್ದು ಕಾರ್ ವಿದ್ಯುತ್ ಕಂಬಕ್ಕೆ ಡಿಕ್ಕ ಹೊಡೆದಿದೆ. ಈ ಸಂದರ್ಭ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ನಟನಿಗೆ ಯಾವ ಪ್ರಾಣಾಪಾಯವಾಗಿಲ್ಲ.
ಘಟನೆಯಲ್ಲಿ ನಾನಿ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ ನಲ್ಲಿ ಏರ್ ಬ್ಯಾಗ್‍ಗಳನ್ನು ಅಳವಡಿಸಿದ್ದ ಕಾರಣ ಚಾಲಕ ಹಾಗೂ ನಟ ಇಬ್ಬರೂ ದೊಡ್ಡ ಅಪಾಯದಿಂದ ಪಾರಾಗಿದ್ದಾರೆ.
ಅಪಘಾತದ ನಂತರ ಪ್ರತಿಕ್ರಯಿಸಿದ ನಟ ನಾನಿ ನಾನು ಆರಾಮವಾಗಿದ್ದೇನೆ.  ಸಣ್ಣ ಪುಟ್ಟ ಗಾಯಗಳಾಗಿದ್ದು ಒಂದು ವಾರದಲ್ಲಿ ಚೇತರಿಸಿಕೊಂಡು ಮತ್ತೆ ಬರುತ್ತೇನೆ. ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ನಾನಿ ಮೆರ್ಲಾಪಾಕಾ ಗಾಂಧಿ ನಿರ್ದೇಶನದ `ಕೃಷ್ಣಾರ್ಜುನ ಯುದ್ಧಂ’ಚಿತ್ರದಲ್ಲಿ ಅಭಿನಯಿಸುತ್ತಿದ್ದು ನಿನ್ನೆ ಕೂಡ ಅದೇ ಚಿತ್ರದ ಚಿತ್ರೀಕರಣಕ್ಕೆ ತೆರಳಿದ್ದರೆನ್ನಲಾಗಿದೆ. ಚಿತ್ರದಲ್ಲಿ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಈ ನಟನಿಗೆ ನುಪಮ ಪರಮೇಶ್ವರನ್ ಮತ್ತು ರುಕ್ಷಾರ್ ಮೀರ್ ನಾಯಕಿಯರಾಗಿ ಅಭಿನಯಿಸುತ್ತಿದ್ದಾರೆ.
ಇನ್ನು ಅಪಘಾತ ಸಂಬಂಧ ಜುಬಿಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಾರ್ ಚಾಲಕನ ವಿರುದ್ಧ  ಸೆಕ್ಷನ್ 3 ಕಾಯ್ದೆಯಡಿ ಕೇಸು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಪಶ್ಚಿಮ ಬಂಗಾಳ ಉಪ ಚುನಾವಣೆ: ಪೊಲೀಸರೊಂದಿಗೆ ಮಾತಿನ ಚಕಮಕಿ: ಶಾಸಕ ಹುಮಾಯೂನ್ ಕಬೀರ್ ಬಂಧನ

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್