ನವದೆಹಲಿ: ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸಮರ ಸಾರಿರುವ ಕಾಂಗ್ರೆಸ್, ಬಿಜೆಪಿ ಶಿಕ್ಷಣವನ್ನು ಕೇಸರಿಕರಣಗೊಳಿಸಿ ಇತಿಹಾಸವನ್ನು ತಿರುಚುತ್ತಿದೆ ಎಂದು ಆರೋಪಿಸಿದೆ.
ಸೇವ್ ಅವರ್ ಹಿಸ್ಟರಿ ಎಂಬ ಹ್ಯಾಷ್ ಟ್ಯಾಗ್ ನ್ನು ಬಳಸಿ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, 48 ಸೆಕೆಂಡ್ ಗಳ ವಿಡಿಯೋವನ್ನು ಬಿಡುಗಡೆ ಮಾಡಿದ್ದು, ಬಿಜೆಪಿ ಇದೇ ರೀತಿ ಮುಂದುವರೆದರೆ ನಮ್ಮ ಮಕ್ಕಳಿಗೆ ತಾಜ್ ಮಹಲ್ ಕಟ್ಟಿಸಿದವರು ಯಾರು ಎಂದು ತಿಳಿಯುವುದಿಲ್ಲ, ಮಹಾತ್ಮ ಗಾಂಧಿಯನ್ನು ಕೊಂದವರು ಯಾರು ಎಂದು ತಿಳಿಯುವುದಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.
ಬಿಜೆಪಿ ಆಡಳಿತವಿರುವ ರಾಜ್ಯ ರಾಜಸ್ಥಾನದಲ್ಲಿ ಜವಾಹರ್ ಲಾಲ್ ನೆಹರು ಅವರ ಇತಿಹಾಸವನ್ನು ತೆಗೆದುಹಾಕಿದೆ. ಅಷ್ಟೇ ಅಲ್ಲದೇ ನಾತೂರಾಮ್ ಗೋಡ್ಸೆ ಗಾಂಧಿಯನ್ನು ಹತ್ಯೆ ಮಾಡಿದ ಬಗ್ಗೆ ಎಲ್ಲೂ ಉಲ್ಲೇಖಗಳಿಲ್ಲ. ಬಿಜೆಪಿ ಇತಿಹಾಸವನ್ನು ತಿರುಚುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.