ಸಿದ್ದರಾಮಯ್ಯ - ಎಡಪ್ಪಾಡಿ ಪಳನಿಸ್ವಾಮಿ
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲು ಅವಕಾಶ ಕೋರಿ ಪತ್ರ ಬರೆದಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿ ಕಾರ್ಯಾಲಯದ ಹಿರಿಯ ಅಧಿಕಾರಿಯೊಬ್ಬರು ಕಾವೇರಿ ನದಿ ನೀರು ಹಂಚಿಕೆ ಸಂಬಂಧಿಸಿದಂತೆ ಚರ್ಚೆಗೆ ಅವಕಾಶ ಕೋರಿ ಸಿದ್ದರಾಮಯ್ಯ ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದರು.
ಕಳೆದ ವಾರ ಎಡಪ್ಪಾಡಿ ಪಳನಿಸ್ವಾಮಿ ಅವರು ತಕ್ಷಣವೇ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕ ಸರ್ಕಾರದೊಂದಿಗೆ ಮಧ್ಯಸ್ಥಿಕೆ ವಹಿಸುವಂತೆ ಕೋರಿದ್ದರು.
ಆದರೆ ತಮಿಳುನಾಡಿನ ಈ ಬೇಡಿಕೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿತ್ತು. ಕಾವೇರಿ ನದಿ ಪಾತ್ರದಲ್ಲಿ ನೀರಿನ ಕೊರತೆ ಇರುವುದರಿಂದ ನೀರು ಹರಿಸಲು ಸಾಧ್ಯವಿಲ್ಲ ಎಂದು ಹೇಳಿತ್ತು.