ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ
ಶ್ರೀನಗರ: ಶೋಪಿಯಾನ್ ಗಡಿಯಲ್ಲಿ ನಾಗರೀಕರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸೇನೆ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿರುವುದು ಗೊಂದಲವನ್ನು ಸೃಷ್ಟಿಸುತ್ತಿದೆ ಎಂದು ಹೇಳಿರುವ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಸರ್ಕಾರದ ಉನ್ನತ ತನಿಖೆ ವಿರುದ್ಧ ಸೋಮವಾರ ತೀವ್ರವಾಗಿ ಕಿಡಿಕಾರಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯಲ್ಲಿ ಮಾತನಾಡಿರುವ ಅವರು, ನಾಗರೀಕರ ಸಾವು ಪ್ರಕರಣ ಕುರಿತಂತೆ ಸರ್ಕಾರ ಈಗಾಗಲೇ ಎಫ್ಐಆರ್ ದಾಖಲಿಸಿಕೊಂಡಿದ್ದು, ಉನ್ನತ ತನಿಖೆಗೆ ಆದೇಶಿಸುವ ಅಗತ್ಯವಿರಲಿಲ್ಲ ಎಂದು ಹೇಳಿದ್ದಾರೆ.
ಸರ್ಕಾರದ ಉನ್ನತ ತನಿಖೆ ಆದೇಶ ಗೊಂದಲವನ್ನುಂಟು ಮಾಡಿದೆ. ಅನಾಮಧೇಯ ವ್ಯಕ್ತಿಗಳ ವಿರುದ್ಧ ಒಂದೆಡೆ ಎಫ್ಐಆರ್ ದಾಖಲಿಸಲಾಗಿದೆ, ಮತ್ತೊಂದೆಡೆ ಜಾಣ್ಮೆಯಿಂದ ತನಿಖೆಗೆ ಆದೇಶ ನೀಡಿದೆ. ಆದರೆ, ಮೇಜರ್ ಮತ್ತು ಮತ್ತೊಬ್ಬರ ಹೆಸರಿನಲ್ಲಿಯೂ ಎಫ್ಐಆರ್ ದಾಖಲಿಸಲಾಗಿದೆ. ಹತ್ಯೆ ಮಾಡಿದವರು ಹಾಗೂ ಹತ್ಯೆಗೆ ಯತ್ನ ಮಾಡಿದ ವ್ಯಕ್ತಿ ಯಾರೆಂಬುದು ಗೊತ್ತಿರುವುದೇ ಆಗಿದ್ದರೆ, ಉನ್ನತ ತನಿಖೆ ಆದೇಶದ ಆಗತ್ಯವೇನಿದೆ. ಈ ವಿಚಾರದಲ್ಲಿ ರಾಜಕೀಯ ಮಾಡದಂತೆ ಸರ್ಕಾರದ ಬಳಿ ಮನವಿ ಮಾಡಿಕೊಳ್ಳುತ್ತೇನೆ. ಕುಟುಂಬ ಸದಸ್ಯರನ್ನು ಕಳೆದುಕೊಂಡ ಕುಟುಂಬಕ್ಕೆ ನ್ಯಾಯ ದೊರಕಬೇಕಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕಿದೆ ಎಂದು ಹೇಳಿದ್ದಾರೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಗನೌಪೊರ ಗ್ರಾಮದಲ್ಲಿ ನಡೆದ ಗುಂಡಿನ ದಾಳಿಗೆ ಇಬ್ಬರು ನಾಗರೀಕರು ಸಾವನ್ನಪ್ಪಿದ್ದರು, ಪ್ರಕರಣ ಸಂಬಂಧ ಶನಿವಾರ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics