ಉತ್ತರ ಪ್ರದೇಶದ ಕಾಸ್ ಗಂಜ್ ನಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದಿದ್ದ ಗಲಭೆಯ ಚಿತ್ರ 
ದೇಶ

ಕಾಸ್ ಗಂಜ್ ಗಲಭೆ: ಉತ್ತರ ಪ್ರದೇಶ ಸರ್ಕಾರದ ವರದಿ ಕೇಳಿದ ಗೃಹ ಸಚಿವಾಲಯ

ಕಾಸ್ ಗಂಜ್ ನಲ್ಲಿನ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ಉತ್ತರ ಪ್ರದೇಶಸರ್ಕಾರಕ್ಕೆ ಸೂಚನೆ ನೀಡಿದೆ.

ಉತ್ತರ ಪ್ರದೇಶ: ಕಾಸ್ ಗಂಜ್   ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ  ಕೇಂದ್ರ ಗೃಹ ಸಚಿವಾಲಯ ಉತ್ತರ ಪ್ರದೇಶಸರ್ಕಾರಕ್ಕೆ ಸೂಚನೆ ನೀಡಿದೆ.

ಗಣರಾಜ್ಯೋತ್ಸವ ದಿನದಂದು ಕಾಸ್ ಗಂಜ್ ನಲ್ಲಿ ಸಂಭವಿಸಿದ್ದ ಗಲಭೆಯಲ್ಲಿ ಯುವಕನೋರ್ವ ಮೃತಪಟ್ಟಿದ್ದ. ಎರಡು ಬಸ್ಸು, ಕಾರು ಹಾಗೂ ಮೂರು ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು.

 ವಿಶ್ವ ಹಿಂದೂ ಪರಿಷತ್, ಹಿಂದೂ ಮಹಾಸಭಾ, ಮತ್ತು ಎಬಿವಿಪಿ ಸಹಯೋಗದಲ್ಲಿ ತಿರಾಂಗಯಾತ್ರೆ ನಡೆಯುತ್ತಿದ್ದ ಸಂದರ್ಭದಲ್ಲಿ ಗಲಭೆ ಭುಗಿಲೆದ್ದಿತ್ತು.ಯಾತ್ರೆ ಕೊಟ್ವಾಲಿ ಪ್ರದೇಶ ತಲುಪುತ್ತಿದ್ದಂತೆ ಕೆಲ ಜನರು ಪ್ರಶ್ನಿಸಿದ್ದಾರೆ. ಈ ವೇಳೆ ಗುಂಪಿನ ನಡುವೆ ಮಾತಿನ ಚಕಮಕಿ ನಡೆದು ಗುಂಡಿನ ದಾಳಿಯಿಂದ ಗುಪ್ತಾ ಎಂಬಾತ ಸಾವನ್ನಪ್ಪಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಪ್ರಕರಣ ಸಂಬಂಧ 118 ಜನರನ್ನು ಬಂಧಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಆ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ