ದೆಹಲಿಯ ರಾಜ್ ಘಾಟ್ ನಲ್ಲಿರುವ ರಾಷ್ಟ್ರಪತಿ ಮಹಾತ್ಮಗಾಂಧಿ ಅವರ ಸಮಾಧಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಮನ ಸಲ್ಲಿಸಿದ ಚಿತ್ರ 
ದೇಶ

ಇಂದು ರಾಷ್ಟ್ರಪಿತ ಮಹಾತ್ಮಗಾಂಧಿ ಅವರ 70 ನೇ ವರ್ಷದ ಪುಣ್ಯಸ್ಮರಣೆ

ಇಂದು ರಾಷ್ಟ್ರಪಿತ ಮಹಾತ್ಮಗಾಂಧಿ ಅವರ 70 ನೇ ವರ್ಷದ ಪುಣ್ಯಸ್ಮರಣೆಯ ದಿನವಾಗಿದ್ದು,ದೇಶಾದ್ಯಂತ ಅವರನ್ನು ಸ್ಮರಿಸಲಾಗುತ್ತಿದೆ.

ದೆಹಲಿ : ಇಂದು ರಾಷ್ಟ್ರಪಿತ ಮಹಾತ್ಮಗಾಂಧಿ ಅವರ 70 ನೇ ವರ್ಷದ ಪುಣ್ಯಸ್ಮರಣೆಯ ದಿನವಾಗಿದ್ದು,ದೇಶಾದ್ಯಂತ ಅವರನ್ನು ಸ್ಮರಿಸಲಾಗುತ್ತಿದೆ. ನಾತುರಾಂ ಗೂಡ್ಸೆ 1948. ಜನವರಿ 30ರಂದು ಮಹಾತ್ಮಗಾಂಧಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದರು.

ಪುಣ್ಯಸ್ಮರಣೆ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್,  ಪ್ರಧಾನಮಂತ್ರಿ ನರೇಂದ್ರಮೋದಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ,ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಸೇರಿದಂತೆ ಹಲವು ಮಂದಿ ಗಣ್ಯರು ರಾಜ್ ಘಾಟ್ ನಲ್ಲಿರುವ ಗಾಂಧಿ ಸಮಾಧಿ ಬಳಿ ತೆರಳಿ ನಮನ ಸಲ್ಲಿಸಿದರು.

ಮಹಾತ್ಮಗಾಂಧಿ ಅವರ ಶಾಂತಿ ಮತ್ತು ಅಹಿಂತೆ ತತ್ವಗಳು ಭಾರತ, ವಿಶ್ವಕ್ಕೆ ಮಾತ್ರವಲ್ಲದೇ, ಪ್ರತಿಯೊಬ್ಬ ವ್ಯಕ್ತಿ, ಕುಟುಂಬ ಹಾಗೂ ಸಮಾಜಕ್ಕೂ ಅನ್ವಯವಾಗುತ್ತದೆ. ಅವರ ತತ್ವ ಆದರ್ಶಗಳು ಇಂದಿಗೂ ಪರಿಣಾಮಕಾರಿಯಾಗಿವೆ ಎಂದು ಆಕಾಶವಾಣಿ ಮನ್ ಕೀ ಬಾತ್ ನಲ್ಲಿ ಪ್ರಧಾನಿ ನರೇಂದ್ರಮೋದಿ ಗುಣಗಾನ ಮಾಡಿದ್ದರು.

  ಮಹಾತ್ಮಗಾಂಧಿ ಅವರ ಜೀವನ ಮತ್ತು ಸಂದೇಶ ಎಲ್ಲಾ ಭಾರತೀಯರಿಗೂ ಸ್ಪೂರ್ತಿಯಾಗಿದೆ ಎಂದು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ತಮ್ಮ  ಟೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

ಮಹಾತ್ಮಗಾಂಧಿ ಅವರ ಮುಕ್ತ , ಜಾತ್ಯತೀತ ಮತ್ತು ಎಲ್ಲರನ್ನೊಳಗೊಂಡ ಭಾರತ ಪರಿಕಲ್ಪನೆಯಲ್ಲಿ ತಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?