ಮುಂಬೈ: ಭೀಮಾ ಕೊರೇಗಾಂವ್ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಮಿಳಿಂದ್ ಏಕ್ಬೋಟ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯಿಂದ ಬಾಂಬೆ ಹೈಕೋರ್ಟ್ ನ ನ್ಯಾಯಾಧೀಶರು ಹಿಂದೆ ಸರಿದಿದ್ದಾರೆ.
ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ಬಿಆರ್ ಗವಾಯಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದಿದ್ದು, ಏಕ್ಬೋಟ್ ನಿರೀಕ್ಷಣಾ ಜಾಮೀನು ಅರ್ಜಿ ಮತ್ತೊಂದು ಪೀಠದ ಎದುರು ವಿಚಾರಣೆಗೆ ಬಂದಿದೆ. ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡುವುದಕ್ಕೆ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಬಾಂಬೆ ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಲಾಗಿತ್ತು. ಇದಕ್ಕೂ ಮುನ್ನ ಕಳೆದ ವಾರ ಪುಣೆಯ ವಿಶೇಷ ನ್ಯಾಯಾಲಯ ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.
ಮಿಳಿಂದ್ ಏಕ್ಬೋಟ್ ವಿರುದ್ಧ 2 ಎಫ್ಐಆರ್ ಗಳು ದಾಖಲಾಗಿದ್ದು, ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪ, ಕೊಲೆ ಯತ್ನದ ಆರೋಪ, ದಲಿತರ ವಿರುದ್ಧ ಹಲ್ಲೆಯ ಆರೋಪವನ್ನು ಎದುರಿಸುತ್ತಿದ್ದಾರೆ.