ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಶೋಪಿಯಾನ್; ಭದ್ರತಾ ಪಡೆಗಳ ಗುಂಡಿಗೆ ಗಾಯಗೊಂಡಿದ್ದ ಯುವಕ ಸಾವು, ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಗುಂಡಿನ ದಾಳಿಗೆ ಮತ್ತೋರ್ವ ಯುವಕ ಬಲಿಯಾಗಿದ್ದು, ಇದರಂತೆ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ...

ಸಂಗ್ರಹ ಚಿತ್ರ
Manjula VN
Updated On : 31 Jan 2018, 1:10 am
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಗುಂಡಿನ ದಾಳಿಗೆ ಮತ್ತೋರ್ವ ಯುವಕ ಬಲಿಯಾಗಿದ್ದು, ಇದರಂತೆ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. 
ಶೆರ್-ಇ-ಕಾಶ್ಮೀರ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಹೇಳಿಕೆ ನೀಡಿದ್ದು, ಬುಧವಾರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಾಗಿದ್ದ 19 ವರ್ಷದ ಯುವಕ ರಯೀಸ್ ಅಹ್ಮದ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆಂದು ಹೇಳಿದೆ. 
ರಯೀಸ್ ಸಾವಿನ ಮೂಲಕ ಗನೌಪೊರಾ ಗ್ರಾಮದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ವಿವಾದಾತ್ಮಕ ಘಟನೆಯೊಂದರಲ್ಲಿ ಸೇನೆಯ ಗುಂಡಿಗೆ ಕಳೆದ ಬುಧವಾರ ಇಬ್ಬರು ಬಲಿಯಾಗಿ, 9 ಮಂದಿ ಗಾಯಗದೊಂಡಿದ್ದರು. ಕಲ್ಲು ತೂರಾಟ ನಡೆದ ಸಂದರ್ಭದಲ್ಲಿ ಗುಂಡು ಹಾರಿಸಲಾಗಿತ್ತು ಎಂದು ಸೇನೆ ಹೇಳಿತ್ತು. 

Advertisement

Advertisement

ಘಟನೆಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸೇನೆಯ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈ ಕ್ರಮಕ್ಕೆ ಬಿಜೆಪಿ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement