ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ 
ದೇಶ

ಶೋಪಿಯಾನ್ ಗುಂಡಿನ ದಾಳಿ ಪ್ರಕರಣ: ರಕ್ಷಣಾ ಸಚಿವರೇಕೆ ಸ್ಪಷ್ಟನೆ ನೀಡುತ್ತಿಲ್ಲ- ಸ್ವಾಮಿ ಪ್ರಶ್ನೆ

ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿರುವ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ...

ನವದೆಹಲಿ: ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿರುವ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದ್ದರು. ರಕ್ಷಣಾ ಸಚಿವೆ ಈ ವರೆಗೂ ಯಾವುದೇ ಸ್ಪಷ್ಟನೆಗಳೂ ನೀಡದೇ ಇರುವುದು ಆಶ್ಚರ್ಯವನ್ನು ತಂದಿದೆ. ರಕ್ಷಣಾ ಸಚಿವರ ಮೌನವನ್ನು ನಾವು ಹೌದು ಎಂದು ತೆಗೆದುಕೊಳ್ಳಬೇಕೆ? ಒಂದು ವೇಳೆ ಇದು ನಿಜವಾದರೆ, ಇದು ಪಕ್ಷದ ನಿಯಮ, ಭಾರತೀಯರ ನಂಬಿಗೆ ಹಾಗೂ ದೇಶಪ್ರೇಮಕ್ಕೆ ವಿರುದ್ಧವಾಗಿದೆ. ನಿರ್ಮಲಾ ಸೀತಾರಾಮನ್ ಅವರು ಫೆ.2ರೊಳಗಾಗಿ ಈ ಬಗ್ಗೆ ಸ್ಪಷ್ಟನೆ ನೀಡದೇ ಹೋದಲ್ಲಿ, ಈ ವಿಚಾರವನ್ನು ಮೇಲ್ಮನೆಯಲ್ಲಿ ಪ್ರಸ್ತಾಪಿಸುತ್ತೇನೆಂದು ಹೇಳಿದ್ದಾರೆ. 
ವಿಧಾನಮಂಡಲದಲ್ಲಿ ಮಾತನಾಡಿದ್ದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ್ದ ಗುಂಡಿನ ದಾಳಿ ಪ್ರಕರಣವನ್ನು ರಕ್ಷಣಾ ಸಚಿವರ ಗಮನಕ್ಕೆ ತಂದಿದ್ದೇನೆ. ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಅಪರಾಧ ನಡೆದಿರುವುದೇ ಆಗಿದ್ದರೆ, ಕ್ರಮ ಕೈಗೊಳ್ಳಿ ಎಂದು ತಿಳಿಸಿದ್ದಾರೆಂದು ಹೇಳಿದ್ದರು. ಈ ಹಿನ್ನಲೆಯಲ್ಲಿ ಸುಬ್ರಮಣಿಯನ್ ಸ್ವಾಮಿಯವರು ನಿರ್ಮಲಾ ಸೀತಾರಾಮನ್ ಅವರು ಸ್ಪಷ್ಟನೆ ನೀಡುವಂತೆ ಆಗ್ರಹಿಸಿದ್ದಾರೆ. 
ನಿನ್ನೆಯಷ್ಟೇ ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜೊತೆಗಿನ ಮೈತ್ರಿ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರಕ್ಕೆ ಪ್ರಶ್ನೆ ಹಾಕಿದ್ದ ಸ್ವಾಮಿಯವರು, ಪಿಡಿಪಿ ಸರ್ಕಾರವನ್ನೇಕೆ ನಾನು ಮುನ್ನಡೆಸುತ್ತಿದ್ದೇವೆ? ಈಗಲೂ ನನಗೆ ಅದು ಅರ್ಥವಾಗುತ್ತಿಲ್ಲ. ಶೋಪಿಯಾನ್ ಜಿಲ್ಲೆಯಲ್ಲಿ ನಾಗರೀಕರ ಸಾವು ಪ್ರಕರಣಗಳ ಕುರಿತಂತೆ ಭದ್ರತಾ ಪಡೆಗಳ ವಿರುದ್ಧ ಮುಫ್ತಿ ಸರ್ಕಾರ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುತ್ತಿದೆ. ಇದೆಂತಹ ಅಸಂಬದ್ಧತೆ? ಸರ್ಕಾರವನ್ನು ಕೆಳಗಿಳಿಸಿ. ಎಫ್ಐಆರ್'ನ್ನು ಹಿಂದಕ್ಕೆ ತೆಗೆದುಕೊಳ್ಳುವಂತೆ ಮುಫ್ತಿಗೆ ಸೂಚಿಸಿ ಎಂದು ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್