ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವುದು 
ದೇಶ

ಮಹಾರಾಷ್ಟ್ರ; ಮಕ್ಕಳ ಕಳ್ಳರೆಂದು ಅನುಮಾನಿಸಿ ಐವರ ಹತ್ಯೆ: 23 ಮಂದಿ ಬಂಧನ

ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ಮಕ್ಕಳ ಕಳ್ಳರೆಂದು ಅನುಮಾನಿಸಿ ಭಾನುವಾರ ಐವರನ್ನು ಹತ್ಯೆ ಮಾಡಿದ....

ಮುಂಬೈ: ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ಮಕ್ಕಳ ಕಳ್ಳರೆಂದು ಅನುಮಾನಿಸಿ ಭಾನುವಾರ ಐವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೋಮವಾರ 23 ಮಂದಿಯನ್ನು ಬಂಧಿಸಿದ್ದಾರೆ.
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಈಗಾಗಲೇ 23 ಆರೋಪಿಗಳನ್ನು ಬಂಧಿಸಿದ್ದೇವೆ ಮತ್ತು ಇನ್ನು ಕೆಲವರನ್ನು ಬಂಧಿಸಲಾಗುವುದು ಎಂದು ದುಲೈ ಪೊಲೀಸ್ ವರಿಷ್ಠಾಧಿಕಾರಿ ಎಂ ರಾಮಕುಮಾರ್ ಅವರು ತಿಳಿಸಿದ್ದಾರೆ.
ಆರೋಪಿಗಳ ಬಂಧನಕ್ಕಾಗಿ ಐದು ತಂಡಗಳನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಎಲ್ಲಾ ಆರೋಪಿಗಳನ್ನು ಬಂಧಿಸುವುದಾಗಿ ಅವರು ತಿಳಿಸಿದ್ದಾರೆ.
ನಿನ್ನೆ ಹತ್ಯೆಯಾದ ಐವರನ್ನು ಸೊಲ್ಲಾಪುರದ ಮಂಗಲ್ವೇದಾ ತೆಹ್ಸಿಲ್ ಖಾವೆ ಗ್ರಾಮದ ಭರತ್ ಶಂಕರ್ ಬೋಸ್ಲೆ(45), ಸಹೋದರ ದಾದಾರಾವ್ ಬೋಸ್ಲೆ, ರಾಜು ಬೋಸ್ಲೆ ಮತ್ತು ಭರತ್ ಮಾಲ್ವೆ ಎಂದು ಗುರುತಿಸಲಾಗಿದೆ.
ಭಾನುವಾರ ಬೆಳಗ್ಗೆ 11.30ರ ಸುಮಾರಿಗೆ  ರಾಯಿನ್ ಪಾಡ್ ಗ್ರಾಮದಲ್ಲಿ ಮಕ್ಕಳ ಕಳ್ಳರೆಂದು ಭಾವಿಸಿ ಐವರು ಪುರುಷರನ್ನು ಜನರ ಗುಂಪೊಂದು ಕಲ್ಲು, ದೊಣ್ಣೆಗಳಿಂದ ಬಡಿದು ಸಾಯಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT