ಸಾಂದರ್ಭಿಕ ಚಿತ್ರ 
ದೇಶ

ಜುಲೈ ತಿಂಗಳು ತಮಿಳುನಾಡಿಗೆ 31 ಟಿಎಂಸಿ ನೀರು ಬಿಡಿ: ಕರ್ನಾಟಕಕ್ಕೆ ಕಾವೇರಿ ಪ್ರಾಧಿಕಾರ ಸೂಚನೆ

ಸುಪ್ರೀಂ ಕೋರ್ಟ್‌ ಆದೇಶದಂತೆ ಜುಲೈ ತಿಂಗಳಿನಲ್ಲಿ ತಮಿಳುನಾಡಿಗೆ 31.24 ಟಿಎಂಸಿ ನೀರು ಹರಿಸುವಂತೆ ಕಾವೇರಿ ನದಿ ನೀರು....

ನವದೆಹಲಿ: ಸುಪ್ರೀಂ ಕೋರ್ಟ್‌ ಆದೇಶದಂತೆ ಜುಲೈ ತಿಂಗಳಿನಲ್ಲಿ ತಮಿಳುನಾಡಿಗೆ 31.24 ಟಿಎಂಸಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೋಮವಾರ ಕರ್ನಾಟಕಕ್ಕೆ ಸೂಚನೆ ನೀಡಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾದ ನಂತರ ಇಂದು ನಡೆದ ಮೊದಲ ಸಭೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ಕುರಿತು ಚರ್ಚೆ ನಡೆಸಿ, ಸುಪ್ರೀಂ ಆದೇಶದಂತ ಕರ್ನಾಟಕ ಈಗಾಗಲೇ ಜೂನ್ ತಿಂಗಳಿನಲ್ಲಿ ನಿಗದಿಗಿಂತ ಹೆಚ್ಚು ನೀರನ್ನು ತಮಿಳುನಾಡಿಗೆ ಹರಿಸಿದೆ. ಸುಮಾರು 2.5ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಬಿಡಲಾಗಿದೆ. ಹೀಗಾಗಿ ಕೇಂದ್ರ ಜಲ ಆಯೋಗದಿಂದ ಅಂಕಿ-ಅಂಶ ಪಡೆದು ನೀರನ್ನು ಬಿಡುವ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಕರ್ನಾಟಕ ತಿಳಿಸಿದೆ.
ಕೇಂದ್ರ ಜಲಮಂಡಳಿ ಮತ್ತು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷ ಎಸ್‌. ಮಸೂದ್‌ ಹುಸೇನ್‌ ನೇತೃತ್ವದಲ್ಲಿ ಸಭೆಯಲ್ಲಿ ರಾಜ್ಯದ ಪ್ರತಿನಿಧಿಯಾಗಿ ಜಲ ಸಂಪನ್ಮೂಲ ಇಲಾಖೆ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಅವರು ಭಾಗವಹಿಸಿದ್ದರು.
ಇನ್ನು ಪ್ರಾಧಿಕಾರದ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು, ತರಾತುರಿಯಲ್ಲಿ ನಾನು ಏನನ್ನೂ ಹೇಳೋದಿಲ್ಲ. ತಮಿಳುನಾಡು ಅಗತ್ಯಕ್ಕಿಂತ ಹೆಚ್ಚು ನೀರಿನ ಬೇಡಿಕೆ ಇಟ್ಟಿದೆ. ಅವ್ರು ಹೇಳಿದ ಕೂಡಲೇ ಬಿಡೋದಕ್ಕೆ ನೀರು ಬೇಕಲ್ವಾ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ