ನವದೆಹಲಿ: ಉತ್ತರ ಪ್ರದೇಶದಲ್ಲಿ ಇತ್ತೀಚಿಗೆ ಹಲವು ಎನ್ ಕೌಂಟರ್ ಗಳು ನಡೆದಿವೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಇತ್ತೀಚಿಗೆ ಉತ್ತರ ಪ್ರದೇಶದಲ್ಲಿ ಸುಮಾರು 500 ನಕಲಿ ಎನ್ ಕೌಂಟರ್ ನಡೆದಿವೆ ಎಂದು ಆರೋಪಿಸಿ ಎನ್ ಜಿಒವೊಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂ ಪೀಠ, ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ನೀಡಿದೆ.
ರಾಜ್ಯದಲ್ಲಿ ನಡೆದ ಸುಮಾರು 500 ನಕಲಿ ಎನ್ ಕೌಂಟರ್ ಗಳಲ್ಲಿ 58 ಮಂದಿ ಮೃತಪಟ್ಟಿದ್ದಾರೆ ಎಂದು ಅರ್ಜಿದಾರರ ಪರ ವಕೀಲ ಸಂಜಯ್ ಪಾರಿಖ್ ಅವರು ದೂರಿದ್ದಾರೆ.
ಈ ಸಂಬಂಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸಹ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ನೀಡಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos