ಮುಂಬೈನಲ್ಲಿ ಭಾರೀ ಮಳೆಗೆ ಕುಸಿದ ಅಂಧೇರಿ ಸೇತುವೆ: ಇಬ್ಬರಿಗೆ ಗಾಯ
ಮುಂಬೈನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಂದು ಬೆಳಗ್ಗೆ 7.30ಕ್ಕೆ ಅಂಧೇರಿ ಗೋಖಲೆ ಬ್ರಿಡ್ಜ್ನ ಅರ್ಧ ಭಾಗ ಕುಸಿದುಹೋಗಿದೆ....
ಮುಂಬಯಿ: ಮುಂಬೈನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಂದು ಬೆಳಗ್ಗೆ 7.30ಕ್ಕೆ ಅಂಧೇರಿ ಗೋಖಲೆ ಬ್ರಿಡ್ಜ್ನ ಅರ್ಧ ಭಾಗ ಕುಸಿದುಹೋಗಿದೆ.
ಗೋಖಲೆ ಬ್ರಿಡ್ಜ್ ಅಂಧೇರಿಯ ಪೂರ್ವ ಮತ್ತು ಪಶ್ಚಿಮ ಭಾಗದ ರೈಲ್ವೆ ಸ್ಟೇಷನ್ಗಳನ್ನು ಸಂಪರ್ಕಿಸುವ ಸೇತುವೆಯಾಗಿದೆ. ದಿನಕ್ಕೆ ಸಾವಿರಾರು ರೈಲುಗಳು ಓಡಾಡುವ ಬೃಹತ್ ಸೇತುವೆ ಕುಸಿದ ಹಿನ್ನೆಲೆಯಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ.
ಇದರಿಂದ ಸಾವಿರಾರು ರೈಲು ಪ್ರಯಾಣಿಕರು ಪರದಾಡುವಂತಾಗಿದೆ. ಸೇತುವೆ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎನ್ ಡಿ ಆರ್ ಎಫ್, ಮತ್ತು ಅಗ್ನಿಶಾಮಕ ದಳ ಅಧಿಕಾರಿಗಳು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.