ಸುಪ್ರೀಂ ಕೋರ್ಟ್ 
ದೇಶ

ಪಿಎನ್ ಬಿಯಂತಹ ಹಣಕಾಸು ಹಗರಣಗಳ ಎಸ್ಐಟಿ ತನಿಖೆ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾ

ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ವಂಚನೆ ಪ್ರಕರಣ ಸೇರಿದಂತೆ ಇತರೆ ಹಣಕಾಸು ಹಗರಣಳನ್ನು ಕೋರ್ಟ್....

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ವಂಚನೆ ಪ್ರಕರಣ ಸೇರಿದಂತೆ ಇತರೆ ಹಣಕಾಸು ಹಗರಣಳನ್ನು ಕೋರ್ಟ್ ನೇತೃತ್ವದ ವಿಶೇಷ ತನಿಖಾ ತಂಡ(ಎಸ್ಐಟಿ)ದ ತನಿಖೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ವಕೀಲ ಎಂ ಎಲ್ ಶರ್ಮಾ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ, ಪಿಐಎಲ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ವಿರುದ್ಧ ಆರೋಪ ಮಾಡಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
ಸರ್ಕಾರದ ಉನ್ನತ ಹುದ್ದೆಯಲ್ಲಿರುವವರ ವಿರುದ್ಧ ಅನಧಿಕೃತ ಮತ್ತು ವಿರೋಧಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯನ್ನು ವಜಾಗೊಳಿಸುತ್ತಿರುವುದಾಗಿ ಪೀಠ ಹೇಳಿದೆ. ಅಲ್ಲದೆ ಆ ಹೆಸರುಗಳನ್ನು ತೆಗೆದುಹಾಕಿ ಮತ್ತೆ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ.
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳು ರಾಜಕೀಯ ನಾಯಕರ ಹಸ್ತಕ್ಷೇಪವಿಲ್ಲದೆ ದೊಡ್ಡ ಮಟ್ಟದ ಹಣವನ್ನು ಬಿಡುಗಡೆ ಮಾಡುವುದಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್