ದೇಶ

ಸಂವಿಧಾನ ವಿರೋಧಿ ನಿರ್ಧಾರವನ್ನು ಲೆಫ್ಟಿನೆಂಟ್ ಗವರ್ನರ್ ವಿರೋಧಿಸಬಹುದು: ಸುಬ್ರಮಣಿಯನ್ ಸ್ವಾಮಿ

Manjula VN
ನವದೆಹಲಿ: ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ನಡುವಿನ ಕಿತ್ತಾಟ ಕುರಿತಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಬುಧವಾರ ಸ್ವಾಗತಿಸಿದ್ದಾರೆ. 
ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ನಡುವಿನ ಕಿತ್ತಾಟಕ್ಕೆ ಕುರಿತಂತೆ ಇಂದು ಮಹತ್ವದ ಆದೇಶ ನೀಡಿರುವ ಸುಪ್ರೀಂಕೋರ್ಟ್ ಕೇಂದ್ರಾಡಳಿತ ದೆಹಲಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. 
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ದೆಹಲಿ ಲೆಫ್ಟಿನೆಂಟ್ ಗವರ್ನರ್ ದೆಹಲಿ ಸಂಪುಟ ನಿರ್ಧಾರಗಳನ್ನು ಗೌರವಿಸಬೇಕು. ಒಂದು ವೇಳೆ ಸಂವಿಧಾನ ವಿರೋಧಿ ನಿರ್ಧಾರಗಳನ್ನು ಕೈಗೊಂಡಾಗ ಮಾತ್ರ ವಿರೋಧ ವ್ಯಕ್ತಪಡಿಸಬಹುದು ಎಂದು ಹೇಳಿದ್ದಾರೆ. 
ಸುಪ್ರೀಂಕೋರ್ ಆದೇಶ ಸರಿಯಾಗಿಯೇ ಇದೆ. ದೆಹಲಿ ಸಂಪುಟದ ನಿರ್ಧಾರಗಳನ್ನು ಲೆಫ್ಟಿನೆಂಟ್ ಗವರ್ನರ್ ಗೌರವಿಸಲೇಬೇಕು. ಆದರೆ, ದೇಶ ವಿರೋಧಿ ಭದ್ರತೆ ಅಥವಾಗ ಸಂವಿಧಾನ ವಿರೋಧಿ ನಿರ್ಧಾರಗಳನ್ನು ಕೈಗೊಂಡಾಗ ವಿರೋಧ ವ್ಯಕ್ತಪಡಿಸಬಹುದು ಎಂದು ತಿಳಿಸಿದ್ದಾರೆ. 
SCROLL FOR NEXT