ಸಂಗ್ರಹ ಚಿತ್ರ 
ದೇಶ

ಕಾಶ್ಮೀರ ಆಯ್ತು, ಈಗ ತ್ರಿಪುರಾ ಸರದಿ: ಬಿಜೆಪಿ ಕೈ ಬಿಟ್ಟ ಐಪಿಎಫ್ ಟಿ, ಲೋಕಸಭೆಗೆ ಏಕಾಂಗಿ ಸ್ಪರ್ಧೆ

ಕಾಶ್ಮೀರದಲ್ಲಿ ಪಿಡಿಪಿಗೆ ಕೈ ಕೊಟ್ಟಿದ್ದ ಬಿಜೆಪಿಗೆ ಇದೀಗ ತ್ರಿಪುರಾದಲ್ಲಿ ದೊಡ್ಡ ಶಾಕ್ ಎದುರಾಗಿದ್ದು, ಅಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚನೆ ಮಾಡಿರುವ ಐಪಿಎಫ್ ಟಿ ಪಕ್ಷ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದೆ.

ಅಗರ್ತಲಾ: ಕಾಶ್ಮೀರದಲ್ಲಿ ಪಿಡಿಪಿಗೆ ಕೈ ಕೊಟ್ಟಿದ್ದ ಬಿಜೆಪಿಗೆ ಇದೀಗ ತ್ರಿಪುರಾದಲ್ಲಿ ದೊಡ್ಡ ಶಾಕ್ ಎದುರಾಗಿದ್ದು, ಅಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚನೆ ಮಾಡಿರುವ ಐಪಿಎಫ್ ಟಿ ಪಕ್ಷ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದೆ.
2019ರ ಲೋಕಸಭಾ ಚುನಾವಣೆಯ ನಿಮಿತ್ತ ಸೀಟು ಹಂಚಿಕೆ ವಿಚಾರದಲ್ಲಿ ಉಭಯ ಪಕ್ಷಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಇದೇ ಕಾರಣಕ್ಕೆ ಐಪಿಎಫ್ ಟಿ ತಾನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದೆ. 
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಐಪಿಎಫ್ ಟಿ ವಕ್ತರಾರು, ತ್ರಿಪುರಾದಲ್ಲಿರುವ ಎರಡೂ ಲೋಕಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ತನ್ನ ಅಭ್ಯರ್ಥಿಗಳನ್ನೇ ಆಯ್ಕೆ ಮಾಡುವಂತೆ ಒತ್ತಡ ಹೇರಿತ್ತು. ಇದು ರಾಜ್ಯದಲ್ಲಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವ ಅಪಾಯವಿದ್ದು, ಇದೇ ಕಾರಣಕ್ಕೆ ತಾವು ಬಿಜೆಪಿ ನಿರ್ಧಾರವನ್ನು ವಿರೋಧಿಸುತ್ತಿದ್ದೇವೆ. ಅಲ್ಲದೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಾನು ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಕಳೆದ ಜನವರಿಯಲ್ಲಿ ನಡೆದ ತ್ರಿಪುರಾ ವಿಧಾನಸಭೆ ಚುನಾವಣೆಯಲ್ಲಿ ಐಪಿಎಫ್ ಟಿ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿತ್ತು. ಇದಕ್ಕೂ ಮೊದಲು ಸುಮಾರು 25 ವರ್ಷಗಳ ಕಾಲ ಎಡಪಕ್ಷ ಮೈತ್ರಿಕೂಟದಲ್ಲಿದ್ದ ಐಪಿಎಫ್ ಟಿ ಸರ್ಕಾರ ರಚನೆ ವೇಳೆ ಬಿಜೆಪಿ ಜೊತೆ ಕೈ ಜೋಡಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT