ನವದೆಹಲಿ: ಕಾಶ್ಮೀರದ ಗಂಡೆರ್ ಬಲ್ ಜಿಲ್ಲೆಯ ಬಲ್ತಲ್ ಮಾರ್ಗದಲ್ಲಿ ಸಂಭವಿಸಿದ ಭೂ ಕುಸಿತದ ಪರಿಣಾಮ 5 ಅಮರನಾಥ ಯಾತ್ರಾರ್ಥಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಬುಧವಾರ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬಲ್ತಲ್ ಮಾರ್ಗದಲ್ಲಿ ಉಂಟಾದ ಭೂಕುಸಿತದಿಂದಾಗಿ ಅಮೂಲ್ಯ ಜೀವಗಳನ್ನು ಕಳೆದುಕೊಂಡಿದ್ದೇವೆ. ಯಾತ್ರಾರ್ಥಿಗಳ ಸಾವು ನೋವು ತಂದಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
ಬಲ್ತಲ್ ಮಾರ್ಗದಲ್ಲಿ ರೈಲ್ ಪಟ್ರಿ ಮತ್ತು ಬ್ರಾರಿಮಾರ್ಗ ನಡುವೆ ಭೂ ಕುಸಿತ ಸಂಭವಿಸಿ ಐವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಅಲ್ಲದೆ, ಮೂವರು ಯಾತ್ರಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.