ಅಫ್ಘಾನಿಸ್ತಾನದಲ್ಲಿ ಶಾಂತಿಗೆ ಅಮೆರಿಕದೊಂದಿಗೆ ಕೆಲಸ ಮಾಡಲಿರುವ ಪಾಕ್
ಅಫ್ಘಾನಿಸ್ತಾನದಲ್ಲಿ ಶಾಂತಿ ಸ್ಥಾಪಿಸುವುದಕ್ಕೆ ಸಂಬಂಧಿಸಿದಂತೆ ಅಮೆರಿಕದೊಂದಿಗೆ ಕೆಲಸ ಮಾಡಲು ಪಾಕಿಸ್ತಾನ ಒಪ್ಪಿಗೆ ಸೂಚಿಸಿದೆ.
ಇಸ್ಲಾಮಾಬಾದ್: ಅಫ್ಘಾನಿಸ್ತಾನದಲ್ಲಿ ಶಾಂತಿ ಸ್ಥಾಪಿಸುವುದಕ್ಕೆ ಸಂಬಂಧಿಸಿದಂತೆ ಅಮೆರಿಕದೊಂದಿಗೆ ಕೆಲಸ ಮಾಡಲು ಪಾಕಿಸ್ತಾನ ಒಪ್ಪಿಗೆ ಸೂಚಿಸಿದೆ.
ಅಮೆರಿಕದ ಉಪ ಸಹಾಯಕ ಕಾರ್ಯದರ್ಶಿ ಹಾಗೂ ಸೇನಾ ಮುಖ್ಯಸ್ಥ ಜನರಲ್ ಖಾಮರ್ ಬಜ್ವಾ ನಡುವೆ ನಡೆದ ಮಾತುಕತೆ ವೇಳೆ ಈ ಅಫ್ಘಾನಿಸ್ತಾನ ವಿಷಯವೂ ಚರ್ಚೆಗೆ ಬಂದಿದ್ದು, ಉಭಯ ದೇಶಗಳೂ ಅಫ್ಘಾನಿಸ್ತಾನದಲ್ಲಿನ ಶಾಂತಿ ಸ್ಥಾಪನೆಗಾಗಿ ಜೊತೆಯಲ್ಲಿ ಕೆಲಸ ಮಾಡಲು ಒಪ್ಪಿಗೆ ಸೂಚಿಸಿವೆ.
ಅಮೆರಿಕದ ಅಧಿಕಾರಿ ಮೂರು ದಿನಗಳ ಪಾಕಿಸ್ತಾನ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ಪಾಕಿಸ್ತಾನದ ಹಣಕಾಸು ಸಚಿವರಾದ ಶಶದ್ ಅಖ್ತರ್, ವಿದೇಶಾಂಗ ಕಾರ್ಯದರ್ಶಿ ತೆಹ್ಮೀನಾ ಜಂಜುವಾ, ಪಾಕ್ ಸೇನಾ ಮುಖ್ಯಸ್ಥರನ್ನು ಭೇಟಿ ಮಾಡಿದ್ದಾರೆ.