ಸಂಗ್ರಹ ಚಿತ್ರ 
ದೇಶ

ಸುಪ್ರೀಂ ಕೋರ್ಟ್ ತೀರ್ಪು ಪ್ರಜಾಪ್ರಭುತ್ವಕ್ಕೆ ಸಂದ ಜಯ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಕಚೇರಿ ನಡುವಿನ ಹಗ್ಗಜಗ್ಗಾಟ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸ್ವಾಗತಿಸಿದ್ದಾರೆ.

ನವದೆಹಲಿ: ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಕಚೇರಿ ನಡುವಿನ ಹಗ್ಗಜಗ್ಗಾಟ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸ್ವಾಗತಿಸಿದ್ದಾರೆ.
ಅತ್ತ ಸುಪ್ರೀಂ ಕೋರ್ಟ್ ತನ್ನ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕೇಜ್ರಿವಾಲ್ ತೀರ್ಪನ್ನು ಶ್ಲಾಘಿಸಿದ್ದಾರೆ. ಅಂತೆಯೇ ತೀರ್ಪು ಸ್ವಾಗತಿಸಿದ ಅವರು, ಇದು ಪ್ರಜಾಪ್ರಭುತ್ವಕ್ಕೆ ಸಂದ ಜಯ ಎಂದು ಟ್ವೀಟ್ ಮಾಡಿದ್ದಾರೆ. 
ಮತ್ತೊಂದೆಡೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ನಿವೃತ್ತ ಅಟಾರ್ನಿ ಜನರಲ್ ಸೋಲಿ ಸೊರಾಬ್ಜಿ ಕೂಡ ತೀರ್ಪು ಸ್ವಾಗತಿಸಿದ್ದು, ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಕಚೇರಿ ಸಂಬಂಧ ಉತ್ತಮವಾಗಿರಬೇಕು. ಇಬ್ಬರೂ ಒಗ್ಗೂಡಿ ಸಾಮರಸ್ಯದಿಂದ ಕೆಲಸ ಮಾಡಿದರೆ ಮಾತ್ರ ಉತ್ತಮ ಆಡಳಿತ ನೀಡಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT