ಅಣ್ಣಾ ಹಜಾರೆ 
ದೇಶ

ಪ್ರಧಾನಿ ಮೋದಿಗೆ 'ಈಡೇರಿಸದ ಭರವಸೆಗಳನ್ನು' ನೆನಪಿಸಿದ ಅಣ್ಣಾ ಹಜಾರೆ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಡೇರಿಸದ ಭರವಸೆಗಳನ್ನು ನೆನಪಿಸಿದ ಹಿರಿಯ ಸಾಮಾಜಿಕ ಹೋರಾಟಗಾರ...

ರಾಳೆಗಾವ್ ಸಿದ್ಧಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಡೇರಸದ ಭರವಸೆಗಳನ್ನು ನೆನಪಿಸಿದ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು, ಅಕ್ಟೋಬರ್ 2ರೊಳಗೆ ಈ ಭರವಸೆಗಳನ್ನು ಈಡೇರಿಸದಿದ್ದರೆ ಮತ್ತೆ ಚಳುವಳಿ ನಡೆಸುವುದಾಗಿ ಗುರುವಾರ ಎಚ್ಚರಿಕೆ ನೀಡಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ನಾನು ಪ್ರಧಾನಿ ಮೋದಿ ಅವರಿಗೆ ಹಲವು ಪತ್ರಗಳನ್ನು ಬರೆದಿದ್ದೇನೆ. ಆದರೆ ಒಂದಕ್ಕೂ ಸರ್ಕಾರದಿಂದ ಉತ್ತರ ಬಂದಿಲ್ಲ ಎಂದು ಹಜಾರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಿದ ಕೇಂದ್ರ ಸರ್ಕಾರ ನಿರ್ಧಾರವನ್ನು ಅಣ್ಣಾ ಹಜಾರೆ ಅವರು ಸ್ವಾಗತಿಸಿದ್ದಾರೆ. ಆದರೆ ರಾಜ್ಯ ಕೃಷಿ ಬೆಲೆ ಆಯೋಗ ಮಾಡಿದ್ದ ಶಿಫಾರಸನ್ನು ತಿರಸ್ಕರಿಸಿರುವುದು ಸರಿಯಲ್ಲ ಎಂದಿದ್ದಾರೆ.
ಭರವಸೆ ನೀಡಿದಂತೆ ಕೃಷಿ ಬೆಲೆ ಆಯೋಗಕ್ಕೆ ಸ್ವಾಯತ್ತತೆ ನೀಡಬೇಕು. ಇದರಿಂದ ರೈತರ ನಿಜವಾದ ಬೆಂಬಲ ಬೆಲ ಸಿಗಲಿದೆ ಎಂದು ಹಜಾರೆ ಹೇಳಿದ್ದಾರೆ.
ಪ್ರಧಾನಿ ಮೋದಿ ಈಡೇರಿಸದ ಭರವಸೆಗಳ ಪಟ್ಟಿ ಮಾಡಿದ ಹಜಾರೆ ಅವರು, ಚುನಾವಣೆ ಸುಧಾರಣೆ, 60 ವರ್ಷ ಮೇಲ್ಪಟ್ಟ ರೈತರಿಗೆ ತಿಂಗಳಿಗೆ ತಲಾ 5 ಸಾವಿರ ರುಪಾಯಿ ಪಿಂಚಣಿ, ಲೋಕಪಾಲ ಮತ್ತು ಲೋಕಾಯುಕ್ತ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!