ದೇಶ

ಸುಪ್ರೀಂ ಆದೇಶ ಅನುಷ್ಠಾನಕ್ಕೆ ಲೆಫ್ಟಿನೆಂಟ್ ಗವರ್ನರ್ ಬೆಂಬಲ, ಸಲಹೆ ಕೋರಿದ ಕೇಜ್ರಿವಾಲ್

Lingaraj Badiger
ನವದೆಹಲಿ: ಸುಪ್ರೀಂ ಕೋರ್ಟ್ ಆದೇಶ ಅನುಷ್ಠಾನಗೊಳಿಸಲು ಬೆಂಬಲ ಮತ್ತು ಮಾರ್ಗದರ್ಶನ ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರಿಗೆ ಮನವಿ ಮಾಡಿದ್ದಾರೆ.
ಈ ಸಂಬಂಧ ಅನಿಲ್ ಬೈಜಾಲ್ ಅವರಿಗೆ ಪತ್ರ ಬರೆದಿರುವ ದೆಹಲಿ ಸಿಎಂ, ಸರ್ಕಾರದ ಎಲ್ಲಾ ಪಾಲುದಾರರು ಸುಪ್ರೀಂ ಕೋರ್ಟ್ ಆದೇಶ ಜಾರಿಗೊಳಿಸುವ ಅಗತ್ಯವಿದೆ ಮತ್ತು ದೆಹಲಿ ಅಭಿವೃದ್ಧಿಗಾಗಿ ಕೆಲಸ ಮಾಡಬೇಕಾಗಿದೆ. ಹೀಗಾಗಿ ನಿಮ್ಮ ಬೆಂಬಲ ಮತ್ತು ಸಲಹೆ ಕೋರಿ ಪತ್ರ ಬರೆಯುತ್ತಿದ್ದೇನೆ ಎಂದು ಹೇಳಿದ್ದಾರೆ.
ಪತ್ರದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿರುವ ಕೇಜ್ರಿವಾಲ್ ಅವರು, ಈಗ 'ಸಮ್ಮತಿಯ' ಅಗತ್ಯ ಇಲ್ಲ ಎಂದು ಹೇಳಿದ್ದಾರೆ.
ಅಧಿಕಾರಿಗಳು ದೆಹಲಿ ಸರ್ಕಾರ ಹೊರಡಿಸಿದ್ದ ಇತ್ತೀಚಿನ ಆದೇಶವನ್ನು ತಿರಸ್ಕರಿಸಿರುವುದು ಕಾನೂನು ಪ್ರಕಾರ ತಪ್ಪು ಎಂದು ದೆಹಲಿ ಸಿಎಂ ಪತ್ರದಲ್ಲಿ ತಿಳಿಸಿದ್ದಾರೆ.
ನಿನ್ನೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರದೊಂದಿಗೆ ಲೆಫ್ಟಿನೆಂಟ್ ಗವರ್ನರ್ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು ಎಂದು ಹೇಳುವ ಮೂಲಕ ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವಿನ ಅಧಿಕಾರ ಜಟಾಪಟಿಗೆ ತೆರೆ ಎಳೆದಿತ್ತು.
ಸಂವಿಧಾನಾತ್ಮಕ ಅವಕಾಶವಿರದ ಹೊರತು ಲೆಫ್ಟಿನೆಂಟ್ ಗವರ್ನರ್ ಸ್ವತಂತ್ರವಾಗಿ ಅಧಿಕಾರ ನಡೆಸುವಂತಿಲ್ಲ ಮತ್ತು ಚುನಾಯಿತ ಸರ್ಕಾರದ ಪ್ರತಿರೋಧಿಯಾಗಿ ನಡೆದುಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
SCROLL FOR NEXT