ರಾಜ್ಯವರ್ಧನ್ ರಾಥೋರ್ , ಸೆಹ್ವಾಗ್ 
ದೇಶ

ಸಮರ್ಥನೆಗಾಗಿ ಸಂಪರ್ಕ ಪ್ರಚಾರ: ಸೆಹ್ವಾಗ್ ಭೇಟಿ ಮಾಡಿದ ರಾಜ್ಯವರ್ಧನ್ ರಾಥೋರ್

ಸಮರ್ಥನೆಗಾಗಿ ಸಂಪರ್ಕ ಪ್ರಚಾರದ ಭಾಗವಾಗಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋರ್ ಹಿರಿಯ ಕ್ರಿಕೆಟ್ ಆಟಗಾರ ಸೆಹ್ವಾಗ್ ಅವರನ್ನು ಭೇಟಿ ಮಾಡಿದರು.

ನವದೆಹಲಿ: ಸಮರ್ಥನೆಗಾಗಿ ಸಂಪರ್ಕ ಪ್ರಚಾರದ ಭಾಗವಾಗಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ   ಸಚಿವ ರಾಜ್ಯವರ್ಧನ್ ಸಿಂಗ್ ರಾಥೋರ್  ಹಿರಿಯ ಕ್ರಿಕೆಟ್ ಆಟಗಾರ ಸೆಹ್ವಾಗ್ ಅವರನ್ನು ಭೇಟಿ ಮಾಡಿದರು.

ನಂತರ ಮಾತನಾಡಿದ ರಾಜ್ಯವರ್ಧನ್ ಸಿಂಗ್ ರಾಥೋರ್, ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಾಲ್ಕು ವರ್ಷದ ಸಾಧನೆಗಳನ್ನು ಜನತೆಗೆ ತಲುಪಿಸುವ ನಿಟ್ಟಿನಲ್ಲಿ ಸಮರ್ಥನೆಗಾಗಿ ಸಂಪರ್ಕ ಪ್ರಚಾರ ಹಮ್ಮಿಕೊಂಡಿದ್ದು,  ಸಮಾಜದ ಗಣ್ಯರನ್ನು ಭೇಟಿ ಮಾಡುವ ಮೂಲಕ  ಸಮಾಜದ ಮೇಲೆ ಪರಿಣಾಮ ಬೀರಲಾಗುತ್ತಿದೆ ಎಂದು ತಿಳಿಸಿದರು.

ಕೇಂದ್ರಸರ್ಕಾರದ ಆಡಳಿತದ ಬಗ್ಗೆಯೂ ಅವರಿಂದ ಸಲಹೆ ಪಡೆದುಕೊಳ್ಳಲಾಗುತ್ತಿದ್ದು, ಸೆಹ್ವಾಗ್ ಕೂಡಾ ಕೆಲವೊಂದು ಸಲಹೆ ನೀಡಿದ್ದಾರೆ. ಕ್ರೀಡಾಪಟುಗಳು ಇಂದಿನ ಯುವಜನಾಂಗದ ಮೇಲೆ ಹೇಗೆ ಪರಿಣಾಮ ಬೀರಬಹುದೆಂಬ ಬಗ್ಗೆ ತಮ್ಮೊಂದಿಗೆ ಸೆಹ್ವಾಗ್ ಅಭಿಪ್ರಾಯ ಹಂಚಿಕೊಂಡಿರುವುದಾಗಿ ರಾಜ್ಯವರ್ಧನ್ ಸಿಂಗ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT