ಮಧ್ಯಪ್ರದೇಶ: 10 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಆತ್ಮಹತ್ಯೆ
ಇಂದೋರ್:10 ನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದು, ಸಂತ್ರಸ್ತ ಬಾಲಕಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಪ್ರಜಾಪತ್ ನಗರದ ವಿದ್ಯಾರ್ಥಿನಿಯಾಗಿದ್ದ ಆತ್ಮಹತ್ಯೆಗೂ ಮುನ್ನ ಪತ್ರ ಬರೆದಿದ್ದು, ಓರ್ವ ಯುವಕ ಲೈಂಗಿಕ ಕಿರುಕುಳ ನೀಡುವುದೂ ಅಲ್ಲದೇ, ಸಾಮಾಜಿಕ ಜಾಲತಾಣದಲ್ಲಿ ಅದನ್ನು ಪೋಸ್ಟ್ ಮಾಡುವುದಾಗಿ ಬೆದರಿಕೆಯನ್ನೂ ಹಾಕಿದ್ದ ಎಂಬುದನ್ನು ಡೆತ್ ನೋಟ್ ನಲ್ಲಿ ಬರೆದಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.
ಲೈಂಗಿಕ ಕಿರುಕುಳ ನೀಡಿದ್ದ ಯುವಕನ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಂತ್ರಸ್ತೆಯ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಆರೋಪಿ ಯುವಕ ಯುವತಿಯ ಕೆಲವೊಂದು ಫೋಟೋಗಳನ್ನು ವಾಟ್ಸ್ ಆಪ್ ನಲ್ಲಿಯೂ ಅಪ್ ಲೋಡ್ ಮಾಡಿದ್ದ ಇದರಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.
ಆರೋಪಿ ಯುವಕನ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಕರ್ತವ್ಯ ಲೋಪ ಉಂಟುಮಾಡಿದ್ದ ಎಸ್ಐ ನ್ನು ಅಮಾನತುಮಾಡಲಾಗಿದ್ದು, ಬೇರೆ ಅಧಿಕಾರಿಗೆ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಹೊರಿಸಲಾಗಿದೆ.