ನವಾಜ್ ಷರೀಫ್ 
ದೇಶ

ಭ್ರಷ್ಟಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಗೆ 10 ವರ್ಷ ಜೈಲು ಶಿಕ್ಷೆ

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ...

ಇಸ್ಲಾಮಾಬಾದ್: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ಪುತ್ರಿ ಮರ್ಯಮ್ ಅವರಿಗೆ ಏಳು ವರ್ಷ ಶಿಕ್ಷೆ ವಿಧಿಸಿ ನ್ಯಾಷನಲ್ ಅಕೌಂಟಬಿಲಿಟಿ ಬ್ಯೂರೊ(ಎನ್ಎಬಿ) ಕೋರ್ಟ್ ಶುಕ್ರವಾರ ತೀರ್ಪು ನೀಡಿದೆ.
ಲಂಡನ್ ನಲ್ಲಿ ನಾಲ್ಕು ಐಷಾರಾಮಿ ಫ್ಲಾಟ್ ಗಳನ್ನು ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರಿಗೆ 10 ವರ್ಷ ಹಾಗೂ ಪುತ್ರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಪನಾಮ ಪೇಪರ್‌ ಲೀಕ್‌ ಪ್ರಕರಣಕ್ಕೆ ಸಂಬಂಧಿಸಿ ನವಾಜ್‌ ಷರೀಫ್‌ ಅವರ ಸಲ್ಲಿಸಿದ್ದ ಪುನರ್‌ ಪರಿಶೀಲನಾ ಅರ್ಜಿಯನ್ನು ಕೋರ್ಟ್‌ ತಿರಸ್ಕರಿಸಿದೆ.
ನವಾಜ್ ಷರೀಫ್ ಅವರು ಅಕ್ರಮ ಸಂಪಾದನೆ ಮತ್ತು ತೆರಿಗೆ ವಂಚನೆಯಿಂದ ಗಳಿಸಿದ ಕಪ್ಪು ಹಣವನ್ನು ಅಂತರಾಷ್ಟ್ರೀಯ ಬ್ಯಾಂಕ್ ಗಳಲ್ಲಿ ಹಾಗೂ ಲಂಡನ್‌ ಸೇರಿದಂತೆ ಹಲವು ದೇಶಗಳಲ್ಲಿ ಆದಾಯಕ್ಕೂ ಮೀರಿ ಆಸ್ತಿ ಹೊಂದಿರುವುದನ್ನು ಪನಾಮ ಪೇಪರ್ಸ್ ಲೀಕ್ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯಸಭೆಯಲ್ಲಿ ಖರ್ಗೆ ರಣಕಹಳೆ: ಪ್ರತಿಪಕ್ಷಗಳ ಭಾವನೆಗಳನ್ನು ಅಮಿತ್ ಶಾಗೆ ತಿಳಿಸಿ – ರಿಜಿಜುಗೆ ಸಭಾಪತಿ ರಾಧಾಕೃಷ್ಣನ್ ಸೂಚನೆ

ಪ್ರತಿಭಟನೆ ನಡೆಸಿದಾಕ್ಷಣ ಜೆನ್ ಝೀ ಗಳು ರಾಷ್ಟ್ರವಿರೋಧಿಯಾಗುವುದಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಕಸಕ್ಕೆ ಎಸೆದಿದ್ದ ಲಾಟರಿ ಟಿಕೆಟ್ ಗೆ ಬಂಪರ್ ಬಹುಮಾನ! ಕೊನೆಗೂ ಹುಡುಕಾಡಿ ಬರೋಬ್ಬರಿ 10.9 ಕೋಟಿ ಗೆದ್ದ ಮಹಿಳೆ!

UK ಮಕ್ಕಳ ಮೇಲಿನ ಅತ್ಯಾಚಾರ, ಕಳ್ಳಸಾಗಣೆ ಪ್ರಕರಣದ ಆರೋಪಿ ಈಗ ಪಿಒಕೆ ಸಂಸದ!

ಬೆಂಗಳೂರು: ಮಧ್ಯರಾತ್ರಿ ಅಪಾರ್ಟ್‌ಮೆಂಟ್‌ ಬಾಲ್ಕನಿಯಿಂದ ಮನಸೋಇಚ್ಛೆ ಗುಂಡು ಹಾರಿಸಿದ ಟೆಕ್ಕಿ; ಬೆಚ್ಚಿಬಿದ್ದ ಜನ! Video