ಸೋನಿಯಾ ಗಾಂಧಿ-ರಾಹುಲ್ ಗಾಂಧಿ 
ದೇಶ

'ಬ್ರಾಹ್ಮಣ ಯುವತಿ ಜೊತೆ ರಾಹುಲ್ ವಿವಾಹಕ್ಕೆ ಸಲಹೆ ನೀಡಿದ್ದೆ, ಆದ್ರೆ ಸೋನಿಯಾ ಗಾಂಧಿ ನನ್ನ ಮಾತು ಕೇಳಲಿಲ್ಲ'

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿವಾಹದ ರಾಜಕೀಯ ಪಡಸಾಲೆಯಲ್ಲಿ ಹಲವು ಬಾರಿ ಚರ್ಚೆಯಾಗಿರುವ ವಿಷಯ.

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿವಾಹದ ರಾಜಕೀಯ ಪಡಸಾಲೆಯಲ್ಲಿ ಹಲವು ಬಾರಿ ಚರ್ಚೆಯಾಗಿರುವ ವಿಷಯ. ಇದೇ ವಿಷಯದ ಬಗ್ಗೆ ರಾಹುಲ್ ಗಾಂಧಿ ಕುಟುಂಬದ ಹಿತೈಶಿ, ಮಾಜಿ ಕಾಂಗ್ರೆಸ್ಸಿಗ, ಹಾಲಿ ಟಿಡಿಪಿ ಸಂಸದ ಜೆಸಿ ದಿವಾಕರ್ ರೆಡ್ಡಿ ಈಗ ಮತ್ತೊಮ್ಮೆ ಮಾತನಾಡಿದ್ದಾರೆ. 
ಉತ್ತರ ಪ್ರದೇಶದಲ್ಲಿ ರಾಜಕಾರಣದ ಮೇಲೆ ಹಿಡಿತ ಸಾಧಿಸಬೇಕಾದರೆ ಬ್ರಾಹ್ಮಣ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅಗತ್ಯ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಗೆ ಓರ್ವ ಉತ್ತಮ ಬ್ರಾಹ್ಮಣ ಯುವತಿ ಜೊತೆ ವಿವಾಹ ಮಾಡಿಸುವಂತೆ ಸೋನಿಯಾ ಗಾಂಧಿಗೆ ಹೇಳಿದ್ದೆ. ಆದರೆ ಸೋನಿಯಾ ಗಾಂಧಿ ನನ್ನ ಸಲಹೆಯನ್ನು ಕೇಳಲಿಲ್ಲ ಎಂದು ಜೆಸಿ ದಿವಾಕರ ರೆಡ್ಡಿ ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ. 
ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಉತ್ತರ ಪ್ರದೇಶದಲ್ಲಿ ಬ್ರಾಹ್ಮಣ ಸಮುದಾಯದ ಬೆಂಬಲ ಅಗತ್ಯವಿದೆ, ಈಹಿನ್ನೆಲೆಯಲ್ಲಿ ರಾಹುಲ್ ಗೆ ಬ್ರಾಹ್ಮಣ ಯುವತಿ ಜೊತೆ ವಿವಾಹ ಮಾಡಿಸುವಂತೆ ಸಲಹೆ ನೀಡಿದ್ದಾಗಿ ರೆಡ್ದಿ ಹೇಳಿದ್ದಾರೆ. 
ರಾಹುಲ್ ಗಾಂಧಿ ಹಾಗೂ ರಾಯ್ ಬರೇಲಿ ಕ್ಷೇತ್ರದ ಶಾಸಕಿ ಅದಿತಿ ಸಿಂಗ್ ವಿವಾಹದ ಕುರಿತು ಇತ್ತೀಚೆಗೆ ವದಂತಿಗಳು ಹಬ್ಬಿದ್ದವು, ಆದರೆ ಸ್ವತಃ ಅದಿತಿ ಈ ಬಗ್ಗೆ ಸ್ಪಷ್ಟನೆ ನೀಡಿ ರಾಹುಲ್ ತನ್ನ ಸಹೋದರನಿದ್ದಂತೆ ಎಂದು ವದಂತಿಗಳಿಗೆ ತೆರೆ ಎಳೆದಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!