ಸಾಂದರ್ಭಿಕ ಚಿತ್ರ 
ದೇಶ

ಬಾಲಕಿ ಸೇರಿ ಮೂವರು ಸಾವು: ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

ಜಮ್ಮು ಮತ್ತು ಕಾಶ್ಮೀರದ ಕುಲ್ಗಮ್ ನಲ್ಲಿಅ ಕಲ್ಲು ತೂರಾಟಗಾರರ ಮೇಲೆ ಭಾರತೀಯ ಸೇನೆ ನಡೆಸಿದ ಗುಂಡಿನ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಮ್ ನಲ್ಲಿಅ  ಕಲ್ಲು ತೂರಾಟಗಾರರ ಮೇಲೆ ಭಾರತೀಯ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ 16 ವರ್ಷದ ಬಾಲಕಿ ಸೇರಿದಂತೆ ಮೂವರು ಮೃತಪಟ್ಟ ಹಿನ್ನೆಲೆಯಲ್ಲಿ ಕಣಿವೆ ರಾಜ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕಾಶ್ಮೀರದ ಬಹುತೇಕ ಭಾಗಗಳಲ್ಲಿ ಮೊಬೈಲ್ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಅನಂತನಾಗ್, ಕುಲ್ಗಮ್, ಪುಲ್ವಾಮ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಕೇಂದ್ರ ಕಾಶ್ಮೀರದ ಶ್ರೀನಗರ ಮತ್ತು ಬದ್ಗಮ್ ಜಿಲ್ಲೆಯಲ್ಲೂ ಇಂಟ್ ನೆಟ್ ಸೇವೆ ನಿರ್ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ದಕ್ಷಿಣ ಕಾಶ್ಮೀರದ ರೆಡ್ವಾಣಿ ಪ್ರದೇಶದಲ್ಲಿ ಭದ್ರತಾ ಪಡೆಗಳ ಕ್ಯಾಂಪ್'ಗಳ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸುವ ಸಲುವಾಗಿ ಸೇನೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT