ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಸೇರಿದಂತೆ ಐವರ ವಿರುದ್ಧ ಶನಿವಾರ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ.
ಸಿಬಿಐ ಇಂದು ರೋಶನುದ್ದಲ ಸಿಬಿಐ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದು, ಉತ್ತರ ಪ್ರದೇಶದ ಬಂಗರ್ ಮೌ ಕ್ಷೇತ್ರದ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರನ್ನು ಪ್ರಮುಖ ಆರೋಪಿಯನ್ನಾಗಿ ಹಾಗೂ ಸಹೋದರ ಅತುಲ್ ಸಿಂಗ್ ಸೆಂಗಾರ್ ಆರೋಪಿಯನ್ನಾಗಿ ಮಾಡಲಾಗಿದೆ.
ಉನ್ನಾವೋದಲ್ಲಿ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರದ ಆರೋಪದಲ್ಲಿ ಶಾಸಕ ಸೆಂಗಾರ್ ಅವರನ್ನು ಬಂಧಿಸಲಾಗಿದ್ದು, ಸದ್ಯ ಸೀತಾಪುರ್ ಜೈಲನಲ್ಲಿದ್ದಾರೆ.