ಯಾತ್ರಿಗಳ ಸ್ಥಳಾಂತರ 
ದೇಶ

ಮಾನಸ ಸರೋವರ ಯಾತ್ರೆ: ನೇಪಾಳದಿಂದ ಎಲ್ಲಾ ಭಾರತೀಯರ ಸ್ಥಳಾಂತರ

ಕೈಲಾಸ ಮಾನಸ ಸರೋವರ ಯಾತ್ರೆಯಿಂದ ಮರಳುತ್ತಿದ್ದ ವೇಳೆ ಸಂಕಷ್ಟಕ್ಕೆ ಸಿಲುಕಿದ್ದ 1,430 ಭಾರತೀಯ ಯಾತ್ರಾರ್ಥಿಗಳನ್ನು...

ನವದೆಹಲಿ: ಕೈಲಾಸ ಮಾನಸ ಸರೋವರ ಯಾತ್ರೆಯಿಂದ ಮರಳುತ್ತಿದ್ದ ವೇಳೆ ಸಂಕಷ್ಟಕ್ಕೆ ಸಿಲುಕಿದ್ದ 1,430 ಭಾರತೀಯ ಯಾತ್ರಾರ್ಥಿಗಳನ್ನು ಸುರಕ್ಷಿತವಾಗಿ ನೇಪಾಳದಿಂದ ಭಾರತಕ್ಕೆ ಸ್ಥಳಾಂತರಿಸಲಾಗಿದೆ ಎಂದು ಭಾರತೀಯ ರಾಯಭಾರ ಕಚೇರಿ ಶನಿವಾರ ತಿಳಿಸಿದೆ.
ಇಂದು ಸಿಮಿಕೋಟ್ ಮತ್ತು ಹಿಲ್ಸಾದಿಂದ 160 ಜನರ ಕೊನೆ ಬ್ಯಾಚ್ ನ ತಂಡವನ್ನು ಸ್ಥಳಾಂತರಿಸುವುದರೊಂದಿಗೆ ರಕ್ಷಣಾ ಕಾರ್ಯ ಮುಕ್ತಾಯವಾಗಿದೆ ಎಂದು ಭಾರತೀಯ ರಾಯಭಾರ ಕಚೇರಿ ಟ್ವೀಟ್ ಮಾಡಿದೆ.
ಭಾರಿ ಮಳೆಯಿಂದಾಗಿ ಕಳೆದ ಐದು ಆರು ದಿನಗಳಿಂದ 290 ಕನ್ನಡಿಗರು ಸೇರಿದಂತೆ ನೇಪಾಳದ ಹಿಲ್ಸಾ,  ಸಿಮಿಕೋಟ್ ಮತ್ತು ಟಿಬೆಟ್ ಭಾಗದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಒಟ್ಟು 1,430 ಭಾರತೀಯ ಯಾತ್ರಿಗಳನ್ನು ರಕ್ಷಿಸಲಾಗಿದೆ.
ಈ ಯಾತ್ರಾರ್ಥಿಗಳ ಸಂಪರ್ಕ ಸಂಬಂಧ ಫೋನ್ ನಂಬರ್: +977-98236 72371ಗೆ ಕರೆ ಮಾಡಬಹುದು ಎಂದು ತಿಳಿಸಲಾಗಿದೆ. ಇನ್ನು, ಯಾತ್ರಾರ್ಥಿಗಳ ಕುಟುಂಬಸ್ಥರು ಇನ್ನೂ ಕೂಡ ಆತಂಕದಲ್ಲಿದ್ದು, ಕುಟುಂಬಸ್ಥರನ್ನು ಸಂಪರ್ಕಿಸಲು ಪರದಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT