ಬಿಜೆಪಿ ಮುಖಂಡ 
ದೇಶ

ತನ್ನ ಪ್ರೀತಿ ಸಾಬೀತುಪಡಿಸಲು ಗುಂಡಿಕ್ಕಿಕೊಂಡ ಬಿಜೆಪಿ ಮುಖಂಡ: ಹೃದಯ, ಅಂಗಾಂಗ ದಾನ

ಬಿಜೆಪಿ ಯುವ ದಳದ ನಾಯಕನೋರ್ವ ತನ್ನ ಪ್ರೀತಿಯನ್ನು ಸಾಬೀತುಪಡಿಸುವ ಸಲುವಾಗಿ ಯುವತಿಯ ಮನೆಯ ಮುಂದೆಯೇ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು...

ಭೋಪಾಲ್: ಬಿಜೆಪಿ ಯುವ ದಳದ ನಾಯಕನೋರ್ವ ತನ್ನ ಪ್ರೀತಿಯನ್ನು ಸಾಬೀತುಪಡಿಸುವ ಸಲುವಾಗಿ ಯುವತಿಯ ಮನೆಯ ಮುಂದೆಯೇ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು ಆತನ ಹೃದಯ ಸಹಿತ ಅಂಗಾಂಗಗಳನ್ನು ಪೋಷಕರು ದಾನ ಮಾಡಿ ಸಹೃದಯ ಮೆರೆದಿದ್ದಾರೆ. 
30 ವರ್ಷದ ಅತುಲ್ ಲೋಖಂಡೆಗೆ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ತಿಳಿಸಿದ್ದರಿಂದ ಆತನ ಪೋಷಕರು ಅಂಗಾಂಗಗಳನ್ನು ದಾನ ಮಾಡಿದ್ದಾರೆ. 
ಪ್ರೀತಿ ವಿಚಾರವಾಗಿ ಲೋಖಂಡೆಗೆ ತಾನು ಪ್ರೀತಿಸುತ್ತಿದ್ದ 27 ವರ್ಷದ ಯುವತಿಯ ತಂದೆಯೊಂದಿಗೆ ಜಗಳವಾಡಿದ್ದ. ನಂತರ ಜುಲೈ 3ರಂದು ರಾತ್ರಿ ಆತ ಆಕೆಯ ಮನೆಯ ಮುಂದೆಯೇ ತನ್ನನ್ನು ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. 
ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆತನನ್ನು ಪರೀಕ್ಷಿಸಿದ ವೈದ್ಯರು ಅತುಲ್ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ತಿಳಿಸಿದ್ದರಿಂದ ಪೋಷಕರು ಅಂಗಾಂಗಗಳ ದಾನಕ್ಕೆ ದೃಧ ಮನಸ್ಸು ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!